ದಿನದ ಸುದ್ದಿ
ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ
ಸುದ್ದಿದಿನ,ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಈ ಹಿಂದೆ ಜೆಡಿಎಸ್ ಪಕ್ಷ ತೊರೆದು ತಟಸ್ಥರಾಗಿದ್ದ ಗೀತಾ ಶಿವರಾಜ್ ಕುಮಾರ್ ಅವರು 2014ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇತ್ತೀಚಿನ ಬೆಳವಣಿಗೆಗಳಲ್ಲಿ ಗೀತಾ ಅವರ ಸಹೋದರ ಮಧು ಬಂಗಾರಪ್ಪ ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ ಸೊರಬ ಕ್ಷೇತ್ರದಿಂದ ಎಂಎಲ್ಎ ಅಭ್ಯರ್ಥಿಯಾಗಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಈ ಕಾರಣದಿಂದಾಗಿ ಗೀತಾ ಶಿವರಾಜ್ ಕುಮಾರ್ ಇಂದು ಬೆಳಗ್ಗೆ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ.
ಈ ಹಿಂದೆ ಗೀತಾ ಶಿವರಾಜ್ ಕುಮಾರ್ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಆ ನಂತರ ಅವರು ಜೆಡಿಎಸ್ ಪಕ್ಷದಿಂದ ಹೊರಬಂದಿದ್ದರು. ಆ ಬಳಿಕ ನಡೆದ ಹಲವು ಬೆಳವಣಿಗೆಗಳಲ್ಲಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ ಕಾರಣ ತಮ್ಮ ನಿಗೆ ಚುನಾವಣೆಯಲ್ಲಿ ಸಾಥ್ ನೀಡಲು ಗೀತಾ ಅವರು ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243