Connect with us

ದಿನದ ಸುದ್ದಿ

ಕನ್ನಡ ಮತ್ತು ಸಂವಹನ ಕೌಶಲ ; ವಿಶೇಷ ಉಪನ್ಯಾಸ ಕಾರ್ಯಕ್ರಮ

Published

on

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ‘ಕನ್ನಡ ಮತ್ತು ಸಂವಹನ ಕೌಶಲ’ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ಶ್ರೀ ಮಂಜುನಾಥ್ ಕೆ. ಮುಖ್ಯಸ್ಥರು ಸಹಾಯಕ ಪ್ರಾಧ್ಯಾಪಕರು, ಕನ್ನಡ ವಿಭಾಗ, ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಚಿತ್ರದುರ್ಗ ಇವರು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾಲೇಜಿನ ಸಮಾಜ ಶಾಸ್ತ್ರ ಪ್ರಾಧ್ಯಾಪಕರಾದ ಆನಂದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು‌.

ಸ್ವಾಗತ ಭಾಷಣವನ್ನು ಸಹಾಯಕ ಪ್ರಾಧ್ಯಾಪಕರು, ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷಣ್ಮುಖಪ್ಪ ಕೆ. ಹೆಚ್ ಮಾಡಿದರು. ಹಾಗೆಯೇ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ, ಡಾ. ರವಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಅಮೃತೇಶ್ವರ ಬಿ. ಜಿ. ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಡಾ. ಮೆಹಮೂದ್ ಖಾನ್, ಮುಖ್ಯಸ್ಥರು, ರಾಜ್ಯಶಾಸ್ತ್ರ ವಿಭಾಗ ಶ್ರೀ ವಿಜಯ ಕುಮಾರ ಕೆ. ಸಂಚಾಲಕರು, ಐಕ್ಯೂಎಸಿ ಶ್ರೀ ಗೋವರ್ಧನ್ ಗಿರಿಶ್ಯಾಮ್, ಅತಿಥಿ ಉಪನ್ಯಾಸಕರು, ಪತ್ರಿಕೋದ್ಯಮ ವಿಭಾಗ ಶ್ರೀ ಶಕೀಲ್ ಅಹಮದ್, ಅತಿಥಿ ಉಪನ್ಯಾಸಕರು, ಕನ್ನಡ ವಿಭಾಗ ಶ್ರೀ ಹನುಮಂತಪ್ಪ ಎ, ಅತಿಥಿ ಉಪನ್ಯಾಸಕರು, ಕನ್ನಡ ವಿಭಾಗ ಇವರು ಉಪಸ್ಥಿತರಿದ್ದರು.

ಕು.ರೇಣುಕಾ ಹಾಗೂ ಕು.ತೇಜು, ಐಚ್ಛಿಕ ಕನ್ನಡ ವಿದ್ಯಾರ್ಥಿನಿಯರು, ಪ್ರಥಮ ಹಾಗೂ ದ್ವಿತೀಯ ಪದವಿ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕು. ಹರ್ಷಿಣಿ ಹಾಗೂ ಕು. ಜಯಲಕ್ಷ್ಮಿ, ಐಚ್ಛಿಕ ಕನ್ನಡ ವಿದ್ಯಾರ್ಥಿನಿ, ಅಂತಿಮ ಪದವಿ ವಿದ್ಯಾರ್ಥಿನಿ ನಿರೂಪಿಸಿದರು. ಕು. ಸಂಜೀವಿನಿ, ಐಚ್ಛಿಕ ಕನ್ನಡ ವಿದ್ಯಾರ್ಥಿನಿ, ಅಂತಿಮ ಪದವಿ ವಿದ್ಯಾರ್ಥಿನಿ ವಂದನಾರ್ಪಣೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಏಪ್ರಿಲ್ 22ರಿಂದ ಉಪಲೋಕಾಯುಕ್ತರ ಪ್ರವಾಸ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

Published

on

ಸುದ್ದಿದಿನ,ದಾವಣಗೆರೆ:ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಉಪಲೋಕಾಯುಕ್ತರಾದ ಬಿ.ವೀರಪ್ಪನವರು ಏಪ್ರಿಲ್ 22 ರಿಂದ 26 ರ ವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ ನಡೆಸುವರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಪಲೋಕಾಯುಕ್ತರು ಹಾಗೂ ಅವರೊಂದಿಗೆ ಆಗಮಿಸುವ ಅಪರ ನಿಬಂಧಕರು, ಉಪನಿಬಂಧಕರ ಪ್ರವಾಸದ ಬಗ್ಗೆ ಮಾಹಿತಿ ನೀಡಿದರು. ಉಪಲೋಕಾಯುಕ್ತರು ಏಪ್ರಿಲ್ 22 ರಂದು ರಾತ್ರಿ 8.30 ಕ್ಕೆ ದಾವಣಗೆರೆಗೆ ಆಗಮಿಸಿ ಸಕ್ರ್ಯೂಟ್‍ಹೌಸ್‍ನಲ್ಲಿ ವಾಸ್ತವ್ಯ ಹೂಡುವರು.

ಏ.23 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ. 9.45 ರಿಂದ 10.45 ರವರೆಗೆ ದಾವಣಗೆರೆ ನ್ಯಾಯಾಂಗ ಸಂಕೀರ್ಣದಲ್ಲಿನ ಬಾರ್ ಅಸೋಸಿಯೇಷನ್‍ನಲ್ಲಿ ವಕೀಲರೊಂದಿಗೆ ಸಂವಾದ ನಡೆಸುವರು. ಬೆ.11 ರಿಂದ 1.30 ರವರೆಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಮತ್ತು ಮ.2.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ವಾಸ್ತವ್ಯ ಹೂಡುವರು.

ಏ.24 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ.10 ರಿಂದ ಮಧ್ಯಾಹ್ನ 1.30 ರವರೆಗೆ ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸುವರು. ಮತ್ತು ಇದೇ ಸ್ಥಳದಲ್ಲಿ ಮಧ್ಯಾಹ್ನ2.30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು, ದೂರು, ಪ್ರಕರಣಗಳನ್ನು ಸ್ವೀಕರಿಸುವರು.

ಸಂಜೆ 5.30 ರಿಂದ 6.30 ರವರೆಗೆ ತುಂಗಭದ್ರಾ ಸಭಾಂಗಣದಲ್ಲಿ ಕಂದಾಯ, ಪಂಚಾಯತ್ ರಾಜ್, ಶಿಕ್ಷಣ, ರೇಷ್ಮೆ, ಕೃಷಿ, ತೋಟಗಾರಿಕೆ, ಸಾರಿಗೆ, ಸಮಾಜ ಕಲ್ಯಾಣ ಹಾಗೂ ವಿವಿಧ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಲೋಕಾಯುಕ್ತ ಕಾಯಿದೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಹೂಡುವರು.

ಏಪ್ರಿಲ್ 25 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ.10 ರಿಂದ ಮಧ್ಯಾಹ್ನ 1.45 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆಯವರೆಗೆ ತುಂಗಭದ್ರಾ ಸಭಾಂಗಣದಲ್ಲಿ ಲೋಕಾಯುಕ್ತದಲ್ಲಿ ಬಾಕಿ ಇರುವ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ನಡೆಸುವರು. ಸಂಜೆ 6 ರಿಂದ 7 ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನ್ಯಾಯಾಂಗ ಅಧಿಕಾರಿಗಳು ಹಾಗೂ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ವಾಸ್ತವ್ಯ ಹೂಡುವರು. ಏ.26 ರಂದುಬೆಳಗ್ಗೆ 7 ಕ್ಕೆ ಬೆಂಗಳೂರಿಗೆ ಪ್ರಯಾಣಿಸುವರು.

ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದಾದ ಪ್ರಕರಣ; ಸಾರ್ವಜನಿಕರು ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದಂತೆ ಯಾವುದೇ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಬಗ್ಗೆ ಹಾಗೂ ಸೌಲಬ್ಯ, ಸೇವೆ ಒದಗಿಸುವಲ್ಲಿ ವಿಳಂಬ, ತಾರತಮ್ಯ, ನಿಯಮ ಪಾಲನೆ ಮಾಡದಿದ್ದಲ್ಲಿ ಏ.24 ರಂದು ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸಲು ವಿವಿಧ ಕೌಂಟರ್‍ಗಳನ್ನು ಇದಕ್ಕಾಗಿ ತೆರೆಯಲಾಗಿರುತ್ತದೆ. ಯಾವುದೇ ಭಯವಿಲ್ಲದೇ ತಮ್ಮ ದೂರುಗಳನ್ನು ಉಪಲೋಕಾಯುಕ್ತರಿಗೆ ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಲು ಪ್ರತ್ಯೇಕ ಕೌಂಟರ್‍ಗಳನ್ನು ತೆರೆಯಲಾಗಿರುತ್ತದೆ, ದೂರು ನೀಡಲು ಆಗಮಿಸುವ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರು ಮತ್ತು ಮಧ್ಯಾಹ್ನ ಉಪಹಾರವನ್ನು ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜಿಲ್ಲೆಯ ಅಭಿವೃದ್ದಿಯ ಹಿನ್ನಲೆ ಹಾಗೂ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮತ್ತು ಹಲವು ಸುಧಾರಣೆಗಳನ್ನು ಜಾರಿ ಮಾಡಲು ಎಲ್ಲಾ ಅಧಿಕಾರಿಗಳು ಸೇರಿ ತಂಡವಾಗಿ ಕೆಲಸ ಮಾಡಲಾಗುತ್ತಿದೆ. ಈಗಾಗಲೇ ಸಂಚಾರಿ ನಿಯಮ ಜಾರಿ, ಹೆಲ್ಮೆಟ್ ಕಡ್ಡಾಯ, ಕಾನೂನು ಸುವ್ಯವ್ಯಸ್ಥೆ, ಕಂದಾಯ ಇಲಾಖೆಯಲ್ಲಿ ಪ್ರಕರಣಗಳ ಶೀಘ್ರ ಇತ್ಯರ್ಥ ಸೇರಿದಂತೆ ಹಲವಾರು ಆಡಳಿತ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಜಿಲ್ಲೆಯ ಎಲ್ಲಾ ಆಯಾಮಗಳಲ್ಲಿ ರಾಜ್ಯದ ರ್ಯಾಂಕಿಂಗ್‍ನಲ್ಲಿ 5 ರೊಳಗೆ ಇರುತ್ತದೆ ಎಂದರು.
ಜನರ ಇನ್ನಷ್ಟು ಕುಂದುಕೊರತೆಗಳ ನಿವಾರಣೆಗಾಗಿ ಜನರ ಬಳಿ ಆಡಳಿತ ಕೊಂಡೊಯ್ಯಲು ಜನತಾದರ್ಶನ ಕಾರ್ಯಕ್ರಮವನ್ನು ಏಪ್ರಿಲ್ ಅಂತ್ಯದಿಂದ ಆರಂಭಿಸಲಾಗುತ್ತದೆ ಎಂದರು.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಮಾತನಾಡಿ ಸರ್ಕಾರಿ ಇಲಾಖೆಗೆ ಸಂಬಂಧಿಸಿದ ಆಡಳಿತ ಪಕ್ಷಪಾತ, ತಾರತಮ್ಯ, ವಿಳಂಬ ನೀತಿಯನ್ನು ಅನುಸರಿಸುತ್ತಿದ್ದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಬಹುದಾಗಿದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರಣ್ಣವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಗಳೂರು | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ : ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 14 ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 37 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದೆ.

ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ವೆಬ್‍ಸೈಟ್ https:/karnemakaone.kar.nic.in/abcd/ ನಲ್ಲಿ ಅರ್ಜಿ ಸಲ್ಲಿಸಬಹುದು. 2024ರ ಏಪ್ರಿಲ್ 1 ರಂತೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದುಪಡಿಸಲಾಗಿದ್ದು, ಈ ಹಿಂದೆ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಎಲ್ಲರೂ ಹೊಸದಾಗಿ ಆನ್ ಲೈನ್ ಅರ್ಜಿ ಸಲ್ಲಿಸಬೇಕೆಂದು ಜಗಳೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಹರಿಹರ, ಜಗಳೂರು, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 27 ಅಂಗನವಾಡಿ ಕಾರ್ಯಕರ್ತೆ, 4 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 214 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಇಲಾಖೆಯ https://dwcd.karnataka.gov.in ರಲ್ಲಿ ಆನ್‍ಲೈನ್ ಸೇವೆಗಳ ಟ್ಯಾಬ್‍ನಲ್ಲಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಯ ಸಬ್‍ಟ್ಯಾಬ್‍ನಲ್ಲಿ ಕ್ಲಿಕ್ ಮಾಡುವ ಮೂಲಕ ಆನ್‍ಲೈನ್ ವೆಬ್‍ಸೈಟ್ ವಿಳಾಸ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿರುತ್ತದೆ.

ಹರಿಹರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 04 ಅಂಗನವಾಡಿ ಕಾರ್ಯಕರ್ತೆ ಮತ್ತು 20 ಅಂಗನವಾಡಿ ಸಹಾಯಕಿಯರನ್ನು ನೇಮಕಾತಿ ಮಾಡಲು ಈ ಹಿಂದೆ ಭೌತಿಕವಾಗಿ ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ಪರಿಗಣಿಸಲಾಗುವುದಿಲ್ಲ, ಈ ಅಭ್ಯರ್ಥಿಗಳು ಸಹ ಹೊಸದಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಆನ್‍ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ತುಂಬುವುದು, ಭಾವಚಿತ್ರ, ಅಗತ್ಯ ದಾಖಲೆ, ಆಧಾರ್ ಸಂಖ್ಯೆ ನಮೂದಿಸಿ ಇ-ಹಸ್ತಾಕ್ಷರದೊಂದಿಗೆ ಅರ್ಜಿ ಪೂರ್ಣಗೊಳಿಸಬೇಕಾಗಿರುತ್ತದೆ. ನಾಲ್ಕು ವಿವಿಧ ಹಂತದಲ್ಲಿ ಅರ್ಜಿಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು.

ವೆಬ್‍ಸೈಟ್‍ನಲ್ಲಿ ತಿಳಿಸಿರುವ ಅಂಶಗಳ ಜೊತೆಗೆ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಇತರೆ ಅವಶ್ಯಕ ದಾಖಲಾತಿಗಳ ಜೊತೆಗೆ, ವಿಧವೆಯರು ಪತಿಯ ಮರಣ ಪ್ರಮಾಣ ಪತ್ರ ಅಥವಾ ವಿಧವಾ ಪ್ರಮಾಣ ಪತ್ರವನ್ನು ಆನ್‍ಲೈನ್‍ನಲ್ಲಿ ಅಪ್ ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ.

ಮುಂದುವರೆದು ಅಭ್ಯರ್ಥಿಗಳ ಆಯ್ಕೆ ಪಟ್ಟಿ ತಯಾರಿಸುವಾಗ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿರುವ ವಿಧವೆಗೆ ಸಂಬಂಧಿಸಿದ ದಾಖಲಾತಿಗಳನ್ನು ಡೌನ್‍ಲೋಡ್ ಮಾಡಿಕೊಂಡು ಭೌತಿಕವಾಗಿ ಪರಿಶೀಲಿಸಿ ಆಯ್ಕೆ ಪಟ್ಟಿ ತಯಾರಿಸಲಾಗುವುದು. ಆಸಿಡ್ ದಾಳಿಗೆ ತುತ್ತಾದ ಮಹಿಳೆಯರಿಗೆ ಮೊದಲ ಆದ್ಯತೆ, ಇಲಾಖೆಯ ಸಂಸ್ಥೆಗಳ ನಿವಾಸಿಗಳಿಗೆ ಎರಡನೇ ಆದ್ಯತೆ, ವಿಧವೆಯರಿಗೆ ಮೂರನೇ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದಾವಣಗೆರೆ ದೂ.ಸಂ:08192-263219, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಹರಿಹರ ದೂ.ಸಂ:08192-241431, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಜಗಳೂರು ದೂ.ಸಂ: 08196-227132, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಹೊನ್ನಾಳಿ ಮತ್ತು ನ್ಯಾಮತಿ ದೂ.ಸಂ: 08196-227132ನ್ನು ಸಂಪರ್ಕಿಸಲು ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending