ದಿನದ ಸುದ್ದಿ
ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವಮಾನವ ದಿನಾಚರಣೆ’
ಸುದ್ದಿದಿನ,ಸಂತೇಬೆನ್ನೂರು:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ ಸೋಮವಾರ ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸಲಾಗಿತ್ತು.
ಜಗತ್ತಿಗೆ ವಿಶ್ವಮಾನವತೆಯ ಸಂದೇಶವನ್ನು ಸಾರಿದ ಜಗದ ಕವಿ ಕುವೆಂಪು ಅವರ ಬರಹಗಳು ಸಾರ್ವಕಾಲಿಕವೂ ಹಾಗೂ ದಾರ್ಶನಿಕವೂ ಆಗಿದ್ದು ಬುದ್ಧ ಬಸವಣ್ಣನವರ ತತ್ವಗಳಿಂದ ನಡೆದು ಅಂಬೇಡ್ಕರರ ಮಾರ್ಗದಲ್ಲಿ ಚಲಿಸಿ ಜಗತ್ತಿಗೆ ವಿಶ್ವಕವಿ ಎನಿಸಿದನ್ನು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಣಬೇರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಹಾಗೂ ಸದರಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಾರುತಿ.ಎಂ. ಇವರು ಮಾತನಾಡಿದರು.
ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಜ್ಯೋತಿ.ಟಿ.ಬಿ. ಇವರು ಮಲೆನಾಡಿನ ಕವಿ ಕುವೆಂಪುರವರ ಕವಿತ್ವವನ್ನು ಮೆಚ್ಚಿಕೊಳ್ಳುವ ಮೂಲಕ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕಾಲೇಜಿನ ದ್ವಿತೀಯ ಬಿ.ಎ ವಿದ್ಯಾರ್ಥಿನಿಯರಾದ ಕು.ಪಲ್ಲವಿ ಹಾಗೂ ಪವಿತ್ರರವರ ಪ್ರಾರ್ಥನೆ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪುಷ್ಪ ನಮನದ ಮೂಲಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅತಿಥಿಗಳು ನೆರವೇರಿಸಿದರು. ಕಾಲೇಜಿನ ವಿದ್ಯಾರ್ಥಿಗಳು ವಿಶ್ವಮಾನವ ಗೀತೆಯನ್ನು ಹಾಡಿದರು.
ಕಾರ್ಯಕ್ರಮದಲ್ಲಿ ಐ.ಕ್ಯು.ಎ.ಸಿ. ಸಂಚಾಲಕರಾದ ಡಾ. ರಾಜಶೇಖರ್. ಎಸ್.ಎಂ. ಸಹಾಯಕ ಪ್ರಾಧ್ಯಾಪಕರುಗಳಾದ ದಿವ್ಯ. ಆರ್, ಡಾ. ಪುನೀತ್ ಕುಮಾರ್.ಡಿ.ಜಿ. ಡಾ. ವೀರೇಂದ್ರ.ಕೆ.ಎಂ. ಡಾ. ಶೃತಿ.ಸಿ. ಮಲ್ಲಿಕಾರ್ಜುನ್.ಕೆ, ಪವನ್ ಕುಮಾರ್.ಎ, ಚೆನ್ನಮ್ಮ ಮಾರಿಹಾಳ್, ಸ್ವಾಮಿ.ಬಿ. ಮುಂತಾದ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾಗಿದ್ದ ಸ್ಪರ್ಧಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕನ್ನಡ ವಿಭಾಗದ ಅಧ್ಯಾಪಕರಾದ ಶ್ರೀಮತಿ ಗಾಯತ್ರಮ್ಮ.ಜಿ.ಸಿ. ಕಾರ್ಯಕ್ರಮವನ್ನು ನಿರೂಪಿಸಿದರು, ಶ್ರೀ ಮೋಹನ.ಕೆ. ಎಲ್ಲರನ್ನು ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ವಿಜಯ್ ಕುಮಾರ್.ಎಸ್. ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ತೃತೀಯ ಬಿ.ಎ. ವಿದ್ಯಾರ್ಥಿನಿ ಕು. ಅಮೃತ ಅಭಿನಂದನೆಗಳನ್ನು ಸಲ್ಲಿಸಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243