ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಾಳೆ ಸಮಾರೋಪ ಸಮಾರಂಭ
ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಾಳೆ 2023-24ನೇ ಸಾಲಿನ ಪಠ್ಯಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾಂಶುಪಾಲರಾದ ಡಾ.ಎಂ.ಮಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದು, ಮುಖ್ಯ ಅತಿಥಿಯಾಗಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅತಿಥಿಗಳಾಗಿ ವಿಶ್ರಾಂತ ಪ್ರಾಂಶುಪಾಲರು, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ತಿಪ್ಪಾರೆಡ್ಡಿ ಆರ್. ಅವರು ಭಾಗವಹಿಸಲಿದ್ದಾರೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜಣ್ಣ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು,ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ವೀಣಾ ನಂಜಪ್ಪ ಹಾಗೂ ಕಾಲೇಜಿನ ಅಧೀಕ್ಷಕ ಶೇಷಪ್ಪ ಟಿ. ಉಪಸ್ಥಿತರಿರಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243