ದಿನದ ಸುದ್ದಿ
ಗಿರೀಶ್ ಕಾರ್ನಾಡ್ ನಿಧನ : ಶಾಲಾ-ಕಾಲೇಜುಗಳಿಗೆ ಸಿಎಂ ರಜೆ ಘೋಷಣೆ
ಸುದ್ದಿದಿನ, ಬೆಂಗಳೂರು : ಇಂದು ಬೆಳಗ್ಗೆ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಗೌರವಾರ್ಥ ಸರ್ಕಾರಿ ಕಚೇರಿಗಳು,ಶಾಲೆ,ಕಾಲೇಜುಗಳಿಗೆ ಇಂದು ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ #GirishKarnad ಗೌರವಾರ್ಥ ಸರ್ಕಾರಿ ಕಚೇರಿಗಳು,ಶಾಲೆ,ಕಾಲೇಜುಗಳಿಗೆ ಇಂದು ಒಂದು ದಿನ ರಜೆ ಘೋಷಿಸಲಾಗುವುದು.ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ
— CM of Karnataka (@CMofKarnataka) June 10, 2019
ಸುದ್ದಿದಿನ.ಕಾಂ|ವಾಟ್ಸಾಪ್|9980346243