ದಿನದ ಸುದ್ದಿ
ಅಪ್ರಾಪ್ತ ಬಾಲಕಿಯ ಆತ್ಯಾಚಾರ,ಕೊಲೆ ಪ್ರಕರಣ : ಜಿಲ್ಲಾಧಿಕಾರಿಯಿಂದ ಸ್ಧಳಕ್ಕೆ ಭೇಟಿ ಪರಿಶೀಲನೆ
ಸುದ್ದಿದಿನ,ಮಂಡ್ಯ : ಜಿಲ್ಲೆಯ ಮದ್ದೂರು ತಾಲ್ಲೂಕಿನ ಹುರುಗಲವಾಡಿಯ ಬಾಲಕಿ ಆತ್ಯಾಚಾರಕ್ಕೆ ಯತ್ನಿಸಿ ಕೊಲೆ ನಡೆದ ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿಗಳಾದ ಎಂ ವಿ ವೆಂಕಟೇಶ್‍ರವರು ಇಂದು ಭೇಟಿ ನೀಡಿ ಪರಿಶೀಲನೆ ಮಾಡಿದರು.
ಇದೇ ವೇಳೆ ಅಪ್ರಾಪ್ತ ಬಾಲಕಿಯ ಪೋಷಕರ ಜೊತೆ ಮಾತನಾಡಿದ ಅವರು ಯಾವುದೇ ಸಂದರ್ಭದಲ್ಲಿಯೂ ಧೃತಿಗೆಡದಂತೆ ಆತ್ಮಸ್ಥೈರ್ಯ ತುಂಬಿ ಸಾಂತ್ವನ ಹೇಳಿದರು.
ಇದೇ ಸಂದರ್ಭದಲ್ಲಿ , ಜಿಲ್ಲಾಡಳಿತದ ವತಿಯಿಂದ 8.50 ಲಕ್ಷ ಘೋಷಣೆಯಾಗಿದ್ದು, ಎನ್ ಎಸ್ ಎಲ್ ಸಕ್ಕರೆ ಕಾರ್ಖಾನೆ ವತಿಯಿಂದ 2.75 ಲಕ್ಷ ನೀಡಲಾಗಿದೆ ಹಾಗೂ ಜಿಲ್ಲಾಡಳಿತದ ವತಿಯಿಂದ 4.25 ಲಕ್ಷವನ್ನು ಸಂತ್ರಸ್ತೆಯ ಖಾತೆಗೆ ಜಮಾ ಮಾಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕಬ್ಬು ಕಟಾವು ಕೆಲಸಗಳಿಗೆ 14 ವರ್ಷದೊಳಗಿನ ಮಕ್ಕಳು ,ಹಾಗೂ ಗರ್ಭಿಣಿ ಸ್ತ್ರೀಯರು ಈ ಕೆಲಸಗಳಿಗೆ ಬರಬಾರದೆಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜಕಲ್ಯಾಣ ಅಧಿಕಾರಿ, ಎನ್ ಎಸ್ ಎಲ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಸದಸ್ಯರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243