ದಿನದ ಸುದ್ದಿ

ಕುರಿ ಸಾಕಣೆಗಾರರಿಗೆ ಬಂಪರ್

Published

on

ಸುದ್ದಿದಿನ ಡೆಸ್ಕ್: ರಾಜ್ಯ ಸರಕಾರವು ಕುರಿ ಸಾಕಣೆಗಾರರಿಗೆ ಬಂಪರ್ ಅವಕಾಶ ನೀಡಿದ್ದು ಪಿಎಲ್‍ಡಿ ಬ್ಯಾಂಕ್ ಮೂಲಕ ನೂರು ಕೋಟಿ ರೂಪಾಯಿ ಸಾಲ ನೀಡುವುದಾಗಿ ಹೇಳಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಹಕಾರ ಸಚಿವ ಬಂಡೆಪ್ಪ ಕಾಂಶೆಂಪುರ ಅವರು ಹೈನುಗಾರಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕುರಿ ಸಾಕಾಣಿಕೆಯು ಲಾಭದಾಯಕವಾಗಿದ್ದು, ಆ ಕ್ಷೇತ್ರವನ್ನು ಉದ್ಧಾರ ಮಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರವು ರೈತರ 47 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಉಪ ಕಸುಬಾದ ಕುರಿ ಸಾಕಾಣಿಕೆಯನ್ನು ಸರಕಾರವು ಉತ್ತೇಜಿಸಬೇಕು. ಈ ನಿಟ್ಟಿನಲ್ಲಿ ಮಹಾ ಮಂಡಲವು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದ್ದು, ಅದಕ್ಕೆ ಸದ್ಯದಲ್ಲೇ ಸಮ್ಮತಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

Trending

Exit mobile version