ದಿನದ ಸುದ್ದಿ
ಪರಿಶಿಷ್ಟ ಪಂಗಡಕ್ಕೆ ಶೇಕಡ 7.5 ರಷ್ಟು ಮೀಸಲಾತಿಗೆ ಸರ್ಕಾರ ಬದ್ಧ : ಸಚಿವ ಶ್ರೀರಾಮುಲು
ಸುದ್ದಿದಿನ ಡೆಸ್ಕ್ : ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಶೇಕಡ 7.5ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಚಿತ್ರದುರ್ಗದಲ್ಲಿಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮೀಸಲಾತಿ ಕಲ್ಪಿಸಲು ಕಾನೂನಿನಿಂದ ಯಾವ ತೊಡಕು ಆಗಬಾರದೆಂದು ಸ್ವಲ್ಪ ವಿಳಂಬವಾಗುತ್ತಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಸರಕಾರ ನಿಲುವನ್ನು ಈಗಾಗಲೇ ವಿಧಾನಸಭೆಯಲ್ಲಿ ಸ್ಪಷ್ಠಪಡಿಸಿದ್ದಾರೆ ಎಂದು ತಿಳಿಸಿದರು.
ನ್ಯಾಯಮೂರ್ತಿ ಸುಭಾಷ್ ಆಡಿ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ವರದಿ ಬಂದ ನಂತರ ಸರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ನುಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243