ದಿನದ ಸುದ್ದಿ
ಸುಗಮ, ಸುರಕ್ಷಿತ ವಾಹನ ಸಂಚಾರಕ್ಕಾಗಿ ಉತ್ತಮ ರಸ್ತೆ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧ : ಸಚಿವ ಸಿ.ಸಿ. ಪಾಟೀಲ್
ಸುದ್ದಿದಿನ, ಬೆಂಗಳೂರು : ಸುಗಮ, ಸುರಕ್ಷಿತ ವಾಹನ ಸಂಚಾರಕ್ಕಾಗಿ ಉತ್ತಮ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಖಾತೆ ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಇಲಾಖೆಯ ವಾರ್ಷಿಕ ಪ್ರಗತಿಯ ಮಾಹಿತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯನ್ನು 3 ಮತ್ತು 4 ನೇ ಘಟ್ಟದಲ್ಲಿ 10 ಸಾವಿರ ಕೋಟಿ ರೂಪಾಯಿ ಮೊತ್ತದಲ್ಲಿ, ರಸ್ತೆಗಳ ಅಭಿವೃದ್ಧಿಗೆ ಕ್ರೀಯಾ ಯೋಜನೆ ಸಿದ್ಧಪಡಿಸಲಾಗಿದೆ ಎಂದರು.
ವಿಶೇಷ ಘಟಕ ಯೋಜನೆಯಡಿ ರಾಜ್ಯದ ಪರಿಶಿಷ್ಟ ಜಾತಿ, ಪಂಗಡದ ಜನರು ವಾಸಿಸುವ ಕಾಲೋನಿಗಳಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಿಸಲು 985 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ಹಾನಿಗೀಡಾಗಿರುವ ರಸ್ತೆ, ಸೇತುವೆ ದುರಸ್ತಿ ಪುನರ್ ನಿರ್ಮಾಣಕ್ಕೆ 610ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಸಚಿವರು ಅಂಕಿ ಅಂಶಗಳನ್ನು ನೀಡಿದರು.
ಮಲೆನಾಡು, ಕರಾವಳಿ ಹಾಗೂ ಒಳನಾಡಿನ ಭಾಗಗಳಲ್ಲಿ ಗ್ರಾಮ ಬಂಧು ಸೇತು ಕಾರ್ಯಕ್ರಮದಲ್ಲಿ 1 ಸಾವಿರದ335 ಕಾಲುವೆ ನಿರ್ಮಿಸಲು ಇನ್ನೂರು ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243