ದಿನದ ಸುದ್ದಿ
ರಾಜ್ಯದ ಮೀನುಗಾರರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ರಾಜ್ಯದ ಮೀನುಗಾರರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ವಿಶ್ವ ಮೀನುಗಾರಿಕಾ ದಿನದ ಅಂಗವಾಗಿ ಸಮಸ್ತ ಮೀನುಗಾರರಿಗೆ ಟ್ವೀಟ್ ಮೂಲಕ ಶುಭಾಶಯ ಕೋರಿರುವ ಮುಖ್ಯಮಂತ್ರಿ, ರಾಜ್ಯದಲ್ಲಿ ಮತ್ಸ್ಯೋದ್ಯಮದ ಅಭ್ಯುದಯಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.
ಕರಾವಳಿಯ ಬಹುತೇಕ ಜನರ ಜೀವನಾಧಾರವಾಗಿರುವ ಮೀನುಗಾರಿಕೆ ಸೂಕ್ತ ಪ್ರೋತ್ಸಾಹ, ನೆರವು ನೀಡುವ ಜೊತೆಗೆ ಒಳನಾಡು ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
"ಸಮಸ್ತ ಮೀನುಗಾರ ಸಹೋದರ ಮತ್ತು ಸಹೋದರಿಯರಿಗೆ ವಿಶ್ವ ಮೀನುಗಾರಿಕಾ ದಿನದ ಶುಭಾಶಯಗಳು. ಕರ್ನಾಟಕದ ಮೀನುಗಾರರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲಿ ಮತ್ಸ್ಯೋದ್ಯಮದ ಅಭ್ಯುದಯಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ." ಮುಖ್ಯಮಂತ್ರಿ : @BSBommai pic.twitter.com/1CyNkoeUQm
— CM of Karnataka (@CMofKarnataka) November 21, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243