ದಿನದ ಸುದ್ದಿ
ಕಾರ್ಮಿಕರ ಭದ್ರತೆಗೆ ಸರ್ಕಾರದ ಯೋಜನೆಗಳು ; ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿ : ಸಚಿವ ಶಿವರಾಮ್ ಹೆಬ್ಬಾರ್
ಸುದ್ದಿದಿನ ಡೆಸ್ಕ್ : ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿ ಬದುಕು ಹಸನು ಮಾಡಿಕೊಳ್ಳಬೇಕೆಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.
ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದರ್ಜಿಗಳ ಕಲ್ಯಾಣಕ್ಕಾಗಿ ಕೇರಳ ಮತ್ತು ತಮಿಳಾಡು ರಾಜ್ಯಗಳಲ್ಲಿನ ಹಲವು ಯೋಜನೆಗಳನ್ನು ಸಮಗ್ರ ಅಧ್ಯಯನ ಮಾಡಿ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಚಿಂತನೆಯಿದೆ ಎಂದು ಸಚಿವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243