ದಿನದ ಸುದ್ದಿ
ನಕಲಿ ವೈದ್ಯರ ಹಾವಳಿಗೆ ಬ್ರೇಕ್ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮ
ಸುದ್ದಿದಿನಡೆಸ್ಕ್: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕರ್ನಾಟಕ ಖಾಸಗಿ ಹೋಮಿಯೋಪಥಿಕ್ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿ. ಆರ್.ಅಂಬೇಡ್ಕರ್ ಭವನದಲ್ಲಿ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ವೈದ್ಯಕೀಯ ಕೋರ್ಸ್ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಈ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು. ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದು ಹೇಳಿದರು. ಕೆಲವು ಸಂದರ್ಭಗಳಲ್ಲಿ ನಕಲಿ ವೈದ್ಯರುಗಳಿಂದ ಅಮಾಯಕರ ಪ್ರಾಣಕ್ಕೂ ಕುತ್ತು ಬಂದಿದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243