ದಿನದ ಸುದ್ದಿ
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸರ್ಕಾರದ ತೀರ್ಮಾನ : ಸಚಿವ ಜೆ.ಸಿ. ಮಾದುಸ್ವಾಮಿ
ಸುದ್ದಿದಿನ, ಬೆಂಗಳೂರು : ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪೀಣ್ಯಾದ ಕೈಗಾರಿಕಾ ಪ್ರದೇಶದಲ್ಲಿ ಮೂಲಸೌಲಭ್ಯ ಕಲ್ಪಿಸಲು 100ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು. ಪರಿಶಿಷ್ಠ ಜಾತಿ, ಪಂಗಡ, ದೌರ್ಜನ್ಯ ಪ್ರಕರಣದಲ್ಲಿ ಮೃತಪಟ್ಟಲ್ಲಿ ನಂತರ ಅವರ ಕಾನೂನು ಬದ್ಧ ವಾರಸುದಾರರಿಗೆ ಅನುಕಂಪದ ಆಧಾರದಲ್ಲಿ ನೌಕರಿ ಕೊಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಇದೇ ತಿಂಗಳು ತೆರವಾಗಲಿರುವ ಮುಖ್ಯಕಾರ್ಯದರ್ಶಿ ಹುದ್ದೆಗೆ 9 ಅಧಿಕಾರಿಗಳು ಪಟ್ಟಿಯಲ್ಲಿದ್ದರೂ, ಅಂತಿಮವಾಗಿ ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶವನ್ನು ಸಂಪುಟ ಸಭೆ ಮುಖ್ಯಮಂತ್ರಿಯವರಿಗೆ ನೀಡಿದೆ, ಸ್ಥಳೀಯ ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿಯೇ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ನಿರ್ಧಾರವಾಗಿದೆ ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243