ದಿನದ ಸುದ್ದಿ
ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಡೇ-ಕೇರ್, ಕಿಮೊಥೆರಪಿ ಕೇಂದ್ರ ಸ್ಥಾಪನೆಗೆ ಸರ್ಕಾರದ ನಿರ್ಧಾರ
ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ-ಕೇರ್ ಮತ್ತು ಕಿಮೊಥೆರಪಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಕಿಮೊಥೆರಪಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ವಿಜಯಪುರ ಮತ್ತು ರಾಯಚೂರು ಜಿಲ್ಲೆಯಲ್ಲಿ ಕೇಂದ್ರ ಸ್ಥಾಪಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇದನ್ನು ಎಲ್ಲ ಜಿಲ್ಲಾಸ್ಪತ್ರೆಗಳಿಗೂ ವಿಸ್ತರಿಸಲಾಗುವುದು. ಪ್ರಾಥಮಿಕ ಹಂತದಲ್ಲಿ ಸ್ತನ ಕ್ಯಾನ್ಸರ್ ಪತ್ತೆ ಹಚ್ಚಿದಲ್ಲಿ ಗುಣಪಡಿಸಬಹುದಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲಿಯೇ ರೋಗ ಪತ್ತೆ ಹಚ್ಚಲು ಅವಶ್ಯಕವಿರುವ ಅತ್ಯಧುನಿಕ ವೈದ್ಯಕೀಯ ಯಂತ್ರೋಪಕರಣಗಳನ್ನು ಜಿಲ್ಲಾಸ್ಪತ್ರೆಗಳಲ್ಲಿ ಅಳವಡಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243