Connect with us

ರಾಜಕೀಯ

ಗ್ರಾಮ ಪಂಚಾಯತ್ ಚುನಾವಣೆ | ಕೊರೋನಾ ಸೋಂಕಿತರು ಅಂಚೆಮೂಲಕ ಮತ ಚಲಾಯಿಸಲು ಅವಕಾಶ

Published

on

ಸುದ್ದಿದಿನ,ದಾವಣಗೆರೆ :ರಾಜ್ಯ ಚುನಾವಣ ಆಯೋಗ ಕರ್ನಾಟಕ ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಳಿಯ ಸಂಸ್ಥೆಗಳ ಸಾರ್ವತ್ರಿಕ ಉಪಚುನಾವಣೆ ನಡೆಸಲು ಅನುಸರಿಸಬೇಕಾದ ಪ್ರಾಮಾಣಿತ ಕಾರ್ಯ ನಿರ್ವಹಣಾ ಪದ್ದತ್ತಿ (ಎಸ್‍ಓಪಿ) ಮಾರ್ಗಸೂಚಿಗಳನ್ನು ರಚನೆ ಮಾಡಲಾಗಿದೆ.

ಮುಂಬಲಿರುವ ಸ್ಥಳಿಯ ಸಂಸ್ಥೆಗಳ ಚುನಾವಣೆಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ನಡೆಸಬೇಕಾಗಿರುತ್ತದೆ ಕೇಂದ್ರ ಗೃಹ ಮಂತ್ರಾಲಯ ಮತ್ತು ಆರ್ಯೋಗ್ಯ ಕುಟುಂಬ ಕಲ್ಯಾಣಇಲಾಖೆಯ ಕೋವಿಡ್-19 ನಿಯಂತ್ರಣಕ್ಕಾಗಿ ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ .

ಸ್ಥಳಿಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಪದ್ದತ್ತಿಗಳ ಬಗ್ಗೆ ರಾಜ್ಯದ ಆರ್ಯೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ನಿಪುಣರೊಂದಿಗೆ ವಿಸ್ತ್ರುತವಾಗಿ ಆಯೋಗದಲ್ಲಿ ಚರ್ಚಿಸಲಾಗಿರುತ್ತದೆ.
ಅವರ ಸಲಹೆಗಳನ್ನು ಪರಿಗಣಿಸಿ ರಾಜ್ಯ ಚುನಾವಣಾ ಆಯೋಗವು ಚುನಾವಣೆಯ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಬೇಕಿದೆ.

ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆಯಲ್ಲಿ ಅಭ್ಯರ್ಥಿಗಳು ಗರಿಷ್ಟ 5 ಜನ ಬೆಂಬಲಿಗರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಚಾರ ಮಾಡಬಹುದಾಗಿರುತ್ತದೆ ಕೋವಿಡ್ ಸೋಂಕಿತ ವ್ಯಕ್ತಿಗಳು ಮತ ಚಲಾಯಿಸಲು ಹಕ್ಕುಳವರಾಗಿದ್ದು ಇವರಿಗೆ ಅಂಚೆ ಮತ ಪತ್ರಗಳ ಮೂಲಕ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಚುನಾವಣಾ ಕಾರ್ಯದಲ್ಲಿ ನಿರತರಾಗುವ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಅವಶ್ಯಕ ಸಾಮಾಗ್ರಿಗಳಾದ ಫೇಸ್‍ಮಾಸ್ಕ್, ಸ್ಯಾನಿಟೈಸರ್, ಥರ್ಮಲ್‍ಸ್ಕ್ಯಾನರ್, ಇತ್ಯಾದಿಗಳನ್ನು ಉಪಯೋಗಿಸಿಕೊಂಡು ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸಲಾಗಿರುತ್ತದೆ ಈ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending