Connect with us

ದಿನದ ಸುದ್ದಿ

ಗ್ರಾಮ ಪಂಚಾಯತಿಗಳ ಚುನಾವಣೆ-2020 : ಪ್ರಚಾರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಬಾವುಟ, ಚಿಹ್ನೆ ಬಳಸುವಂತಿಲ್ಲ

Published

on

ಸುದ್ದಿದಿನ,ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆಗಳು ಪಕ್ಷರಹಿತವಾಗಿದ್ದು, ರಾಜಕೀಯ ಪಕ್ಷಗಳು ಗ್ರಾ.ಪಂ ಚುನಾವಣೆ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಿರುವ ಸಭೆ, ಸಮಾರಂಭಗಳನ್ನು ನಡೆಸುವ ರಾಜಕೀಯ ಮುಖಂಡರುಗಳ ಭಾವಚಿತ್ರಗಳನ್ನು ಕರ ಪತ್ರಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ, ಚಿಹ್ನೆಯನ್ನು ಬಳಸಿ ಪ್ರಚಾರ ಮಾಡುವಂತಿಲ್ಲವೆಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಗ್ರಾ.ಪಂ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸಲಾಗುತ್ತಿದೆ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ, ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು, ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ. ರಾಜಕೀಯ ಮುಖಂಡರ ಭಾವಚಿತ್ರ, ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು, ಹಂಚಿವುದು ಮಾಡುವಂತಿಲ್ಲ. ಅಲ್ಲದೇ ರಾಜಕೀಯ ಪಕ್ಷಗಳ ಚಿಹ್ನೆ ಬಳಸಿ ಕಟೌಟ್‍ಗಳು, ಬ್ಯಾನರ್ ಮತ್ತು ಬಂಟಿಂಗ್‍ಗಳ ಮೂಲಕ ಪ್ರಚಾರ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ.

ಚುನಾವಣಾ ಅಭ್ಯರ್ಥಿಗಳು ಟಿವಿ ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ. ಇಂತಹ ಪ್ರಕರಣಗಳು ಚುನಾವಣೆಯಲ್ಲಿ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಅಲ್ಲದೇ ಅಂತವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending