ದಿನದ ಸುದ್ದಿ

ಗ್ರಾ.ಪಂ ಚುನಾವಣೆ ಮುಂದೂಡಿಕೆ ಇಲ್ಲ : ಹೈ ಕೋರ್ಟ್

Published

on

ಸುದ್ದಿದಿನ, ಬೆಂಗಳೂರು:ಗ್ರಾಮ ಪಂಚಾಯಿತಿ ಚುನಾವಣೆಗೆ ಈಗಾಗಲೇ ಸಕಲ ಸಿದ್ಧತೆಗಳಾಗಿದೆ. ಆದರೆ ಚುನಾವಣೆಯನ್ನು ಮುಂದೂಡಬೇಕು ಎಂಬ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಮನವಿಯನ್ನು ಪರಿಗಣಿಸುವುದಿಲ್ಲ ಎಂದು ಹೈಕೋರ್ಟ್‌ಗೆ ರಾಜ್ಯ ಚುನಾವಣಾ ಆಯೋಗವು ತಿಳಿಸಿದೆ.

ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ವಿಭಾಗೀಯ ಪೀಠಕ್ಕೆ ವಿವರಣೆ ನೀಡಿದ ಆಯೋಗದ ಪರ ವಕೀಲ ಕೆ.ಎನ್. ಫಣೀಂದ್ರ, ಕೊರೋನಾ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್‌ ಮನವಿ ಸಲ್ಲಿಸಿವೆ. ಆದರೆ ಚುನಾವಣೆ ಮುಂದೂಡು ಸಾಧ್ಯವಿಲ್ಲ ಎಂದು ನಿರ್ಧರಿಸಲಾಗಿದೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version