ದಿನದ ಸುದ್ದಿ
ಹೊನ್ನಾಳಿ | ಗ್ರಾ.ಪಂ ಚುನಾವಣಾ ಅಭ್ಯರ್ಥಿ ಹೃದಯಾಘಾತದಿಂದ ಸಾವು
ಸುದ್ದಿದಿನ, ದಾವಣಗೆರೆ : ದಾವಣಗೆರೆ ಜಿಲ್ಲೆ, ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಕದಕಟ್ಟೆ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಡಿ.ಬಸಪ್ಪ(72) ಅವರು ಮಂಗಳವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೊದಲ ಹಂತದ ಚುನಾವಣಾ ಮತದಾನ ನಡೆದ ಮಂಗಳವಾರದಂದು ಅವರು ಬೆಳಗ್ಗೆಯಿಂದಲ್ಲೇ ಚುನಾವಣೆಯಲ್ಲಿ ಉತ್ಸಾಹದಿಂದಲೇ ಭಾಗವಹಿಸಿ ದ್ದರು.
ಮತದಾನ ಮುಗಿದ ನಂತರ ತಮ್ಮ ಗ್ರಾಮಕ್ಕೆ ತೆರಳುವ ಸಂದರ್ಭ ಅವರಯ ರಸ್ತೆಯಲ್ಲೇ ವಾಂತಿ ಮಾಡಿ ಎದೆನೋವು ಎಂದು ಕುಸಿದು ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರಾದ ಡಿ.ಬಸಪ್ಪ ಅವರು ಐದು ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದರು. ಈಗ ಆರನೇ ಬಾರಿಗೆ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಗಂಡು ಮಕ್ಕಳಿದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243