Connect with us

ದಿನದ ಸುದ್ದಿ

ದಾವಣಗೆರೆ | ಸಿಎಂ ರಿಂದ ಗ್ರಾಮ ವಾಸ್ತವ್ಯಕ್ಕೆ ಚಾಲನೆ, ಕಂದಾಯ ಸಚಿವರಿಂದ ಗ್ರಾಮ ವಾಸ್ತವ್ಯ ; ಗ್ರಾಮ ವಾಸ್ತವ್ಯವನ್ನು ಐತಿಹಾಸಿಕವಾಗಿಸಲು ಸಿದ್ಧತೆ : ರೇಣುಕಾಚಾರ್ಯ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಗ್ರಾಮ ವಾಸ್ತವ್ಯವನ್ನು ಮತ್ತೊಮ್ಮೆ ಆರಂಭಿಸಲು ಸರ್ಕಾರ ಚಾಲನೆ ನೀಡುತ್ತಿದ್ದು, ಇದೇ ಅಕ್ಟೋಬರ್ 16 ರಂದು ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಮಾನ್ಯ ಮುಖ್ಯಮಂತ್ರಿಗಳು ಕುಂದೂರು ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆಗೆ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಪ್ರಸಕ್ತ ಸರ್ಕಾರ ರೈತರು, ಕಾರ್ಮಿಕರು, ಮಹಿಳೆಯರಿಗೆ ಹಾಕಿಕೊಂಡಿರುವ ಕಾರ್ಯಕ್ರಮಗಳು ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿವಿಧ ಇಲಾಖೆಗಳಿಂದ ಏರ್ಪಡಿಸಿರುವ ಮಾಹಿತಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮದ ಅಂಗವಾಗಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ವಿಶೇಷ ಅಲಂಕೃತ ಚಕ್ಕಡಿಗಳಲ್ಲಿ ಸ್ಥಳೀಯ ಜಾನಪದ ಕಲಾವಿದರು ಹಾಗೂ ವಿವಿಧ ಕಲಾತಂಡಗಳೊಂದಿಗೆ ಆನೆ ಮೆರವಣಿಗೆಯೊಂದಿಗೆ ಸ್ವಾಗತಿಸಲಾಗುವುದು. ಈ ಹಿನ್ನೆಲೆಯಲ್ಲಿ ಗ್ರಾಮ ವಾಸ್ತವ್ಯ ಈ ಹಿಂದೆ ನಡೆದ ಗ್ರಾಮವಾಸ್ತವ್ಯಗಳಿಗಿಂತ ವೈವಿಧ್ಯ ಹಾಗೂ ವಿಶಿಷ್ಟವಾಗಿರಲಿದ್ದು ಕಾರ್ಯಕ್ರಮದ ಸದುಪಯೋಗವನ್ನು ಅವಳಿ ತಾಲ್ಲೂಕುಗಳ ಸಾರ್ವಜನಿಕರಿಗೆ ಸಿಗಬೇಕೆಂಬುದು ನಮ್ಮ ಸಂಕಲ್ಪವಾಗಿದೆ ಎಂದರು.

ಕೋವಿಡ್ ನಿಯಂತ್ರಣಕ್ಕೆ ಬಂದ ಮೇಲೆ ಮೊದಲ ಬಾರಿ ಮಾನ್ಯ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯಕ್ಕೆ ಭೇಟಿ ನೀಡಿ ಕಾರ್ಯಕ್ರಮ ನಡೆಸಿಕೊಡಲಿದ್ದು, ಕಂದಾಯ ಇಲಾಖ ಸಚಿವರು ಗ್ರಾಮ ವಾಸ್ತವ್ಯ ಮಾಡುವರು. ಈ ನಿಟ್ಟಿನಲ್ಲಿ ಗ್ರಾಮಸ್ಥರು ವಿಶೇಷ ಕಾಳಜಿ ವಹಿಸಿ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿಕೊಡಬೇಕು ಎಂದ ಅವರು, ಮುಖ್ಯಮಂತ್ರಿಗಳು ಅಂದು ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದರು.

ಅಂದು ಕಂದಾಯ ಸಚಿವರಾದ ಆರ್.ಅಶೋಕ್, ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ್ ಹಾಗೂ ಜನಪ್ರತಿನಿಧಿಗಳು ಬೆಳಿಗ್ಗೆ 10 ಕ್ಕೆ ಸುರಹೊನ್ನೆ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿಯ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಿ ಶೇ.60 ರಿಂದ 70 ರಷ್ಟು ಸಮಸ್ಯೆಯನ್ನು ಸ್ಥಳದಲ್ಲಿಯೇ ಪರಿಹರಿಸಲಿದ್ದಾರೆ. ನಂತರ ಮಧ್ಯಾಹ್ನ ಮುಖ್ಯಮಂತ್ರಿಗಳೊಂದಿಗೆ ಕುಂದೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ಕಸ್ತೂರಭಾ ವಸತಿ ಶಾಲೆಯಲ್ಲಿ ವಾಸ್ತವ್ಯ ಮಾಡಿ ಅಂದು ರಾತ್ರಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಭೆಯಲ್ಲಿದ್ದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳು ಅದರಲ್ಲೂ ಪ್ರಮುಖವಾಗಿ ಕೃಷಿ, ತೋಟಗಾರಿಕೆ, ಕಾರ್ಮಿಕ, ಆರೋಗ್ಯ, ಆಹಾರ, ಬೆಸ್ಕಾಂ, ಸಾರಿಗೆ, ಅರಣ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳು ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ನೀಡಲಾಗುವ ಸವಲತ್ತುಗಳು, ಸೌಲಭ್ಯಗಳು, ಸಾಲ ಮಂಜೂರಾತಿ ಸೇರಿದಂತೆ ವಿವಿಧ ಸೌಲಭ್ಯಗಳ ವಿತರಣೆಗಾಗಿ ಈಗಾಗಲೇ ಎಲ್ಲಾ ಇಲಾಖಾ ಅಧಿಕಾರಿಗಳು ಪಟ್ಟಿಯನ್ನು ತಯಾರಿಸಿಕೊಂಡಿದ್ದು, ಫಲಾನುಭವಿಗಳನ್ನು ಕಾರ್ಯಕ್ರಮದಂದು ಕರೆತಂದು ಪುನಃ ಕರೆದುಕೊಂಡು ಹೋಗುವ ಜವಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಸೂಚಿಸಿದರು.

ಸುರಹೊನ್ನೆಯಲ್ಲಿ ಬೆಳಿಗ್ಗೆ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಕಂದಾಯ ಸಚಿವರು, ಸಂಸದರು, ಅಧಿಕಾರಿಗಳು ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿ ಹೆಲಿಪ್ಯಾಡ್ ಬಳಿ ತೆರಳಿ ಮಾನ್ಯ ಮುಖ್ಯಮಂತ್ರಿಗಳನ್ನು ಸ್ವಾಗತಿಸಿ, ಅವರೊಂದಿಗೆ ಮಾಸಡಿ ಮೂಲಕ ಕುಂದೂರು ಗ್ರಾಮ ಭೇಟಿ ನೀಡಿ, ಅಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಕಂದಾಯ ಸಚಿವರು ಗ್ರಾಮ ವಾಸ್ತವ್ಯ ಮಾಡುವರು ಎಂದು ಮಾಹಿತಿ ನೀಡಿದರು.

ಕುಂದೂರು ಹಾಗೂ ಸುರಹೊನ್ನೆ ಗ್ರಾಮದ ರಸ್ತೆ, ಚರಂಡಿ, ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛಗೊಳಿಸಬೇಕು. ಅಂದು ಗ್ರಾಮಗಳಲ್ಲಿ ಕರೆಂಟ್ ಹೋಗದಂತೆ ಬೆಸ್ಕಾಂ ಇಲಾಖೆಯವರು ಕ್ರಮ ವಹಿಸಬೇಕು. ಎಲ್ಲಾ ಇಲಾಖೆಗಳಿಗೂ ವಹಿಸಿರುವ ಕೆಲಸಗಳನ್ನು ಜವಬ್ದಾರಿಯಿಂದ ನಿಭಾಯಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಡಿಹೆಚ್‍ಓ ಡಾ.ನಾಗರಾಜ್ ಮಾತನಾಡಿ, ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕು ತಹಶೀಲ್ದಾರ್ ಅವರಿಂದ ಇಲ್ಲಿಯ ಗ್ರಾಮಗಳಲ್ಲಿ ಕೋವಿಡ್ ನಿಂದ ಮೃತಪಟ್ಟವರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದು, ಅವರಿಗೆ ಸರ್ಕಾರದಿಂದ ಸಿಗುವ ಪರಿಹಾರ ನೀಡಲಾಗುವುದು. ಕುಂದೂರು ಗ್ರಾಮದಲ್ಲಿ ಕೋವಿಡ್ ಕಾರಣದಿಂದ ಮೃತಪಟ್ಟವರಿಗೆ ಕಾರ್ಯಕ್ರಮದ ದಿನದಂದು ಸಿಎಂ ಮೂಲಕ ಪರಿಹಾರ ಒದಗಿಸಲಾಗುವುದು.

ಎರಡು ಗ್ರಾಮಗಳಲ್ಲಿ ಸಂಪೂರ್ಣ ವ್ಯಾಕ್ಸಿನ್ ಆಗಿದೆ. ಇಲ್ಲಿಯ 6-7 ವಿಕಲಚೇತನರಿಗೆ ಹೆಲ್ತ್ ಕಾರ್ಡ್ ಸಿಕ್ಕಿದ್ದು, ಉಳಿದವರಿಗೆ ತಲುಪಿಸಲಾಗುವುದು ಎಂದು ತಿಳಿಸಿದರು. ನಂತರ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯಿಂದ ಏರ್ಪಡಿಸಲಾಗಿರುವ ಕಾರ್ಯಕ್ರಮಗಳ ಬಗೆಗೆ ಮಾಹಿತಿಯನ್ನು ಹಂಚಿಕೊಂಡರು.

ಸಭೆಯ ನಂತರ ಕುಂದೂರು ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಗ್ರಾಮದ ಆಂಜನೇಯ ದೇವಾಲಯದಲ್ಲಿ ಹೊರಾಂಗಣದಲ್ಲಿ ಗ್ರಾಮಸ್ಥರೊಂದಿಗೆ ಏರ್ಪಡಿಸಿದ ಸಭೆಯಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ರೇಣುಕಾಚಾರ್ಯ ಅವರು, ಕಾರ್ಯಕ್ರಮದ ದಿನದಂದು ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ.ವಿಜಯ ಮಹಾಂತೇಶ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ರಾಜೀವ್, ಆಹಾರ ಇಲಾಖೆಯ ಜೆಡಿ ಮಂಟೆಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಜಯಕುಮಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಮಬೋವಿ, ಸಿಪಿಎ ನಾಗರಾಜು ಸೇರಿದಂತೆ ಜಿಲ್ಲಾ ಹಾಗು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 1 ಸಾವಿರದ 350 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Published

on

ಸುದ್ದಿದಿನ,ದಾವಣಗೆರೆ:ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯಲ್ಲಿಂದು 1 ಸಾವಿರದ 350 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ-ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಹಣ ಇಲ್ಲದಿದ್ದರೆ ಇಷ್ಟೊಂದು ಅಭಿವೃದ್ಧಿ ಮಾಡಲು ಸಾಧ್ಯವೇ ಎಂದು ಪ್ರಶ್ನಸಿದರು.

ರಾಜ್ಯದಲ್ಲಿ ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಲ-ಸಲ್ಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್‌ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ಸುಮಾರು ₹1350 ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಇಲಾಖಾ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.

ದಾವಣಗೆರೆಯಲ್ಲಿ ನಡೆದ ಇಂದಿನ ಐತಿಹಾಸಿಕ ಕಾರ್ಯಕ್ರಮದಲ್ಲಿ ಉತ್ಸುಕದಿಂದ ಭಾಗಿಯಾಗಿದ್ದೇನೆ. ದಾವಣಗೆರೆ ಜಿಲ್ಲೆಯಲ್ಲಿ 6 ಶಾಸಕರು ಮತ್ತು ಒಬ್ಬ ಸಂಸದರನ್ನು ಆಯ್ಕೆ ಮಾಡಿ, ನಿಮ್ಮ ಸೇವೆಗೆ ಅವಕಾಶವನ್ನು ಮಾಡಿಕೊಟ್ಟಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದರು.

ನಿಮ್ಮೆಲ್ಲರ ಶಕ್ತಿಯಿಂದಾಗಿ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಇಡೀ ದೇಶಕ್ಕೆ ಸಂದೇಶವನ್ನು ಕಳುಹಿಸಿರುವುದು ನಮ್ಮ ಪುಣ್ಯ. ಬೆಲೆಯೇರಿಕೆಯಿಂದ ತತ್ತರಿಸಿದ ಸಾವಿರಾರು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಮೂಲಕ ನೆರವಾಗುತ್ತಿದ್ದೇವೆ. ಹಲವು ವರ್ಷಗಳಿಂದ ದಾಖಲೆ ಇಲ್ಲದೇ ಅಲೆಯುತ್ತಿದ್ದವರಿಗೆ ‘ಭೂ ಗ್ಯಾರಂಟಿ’ ಯೋಜನೆ ಕೊಟ್ಟಿದ್ದೇವೆ. ಕಂದಾಯ ಇಲಾಖೆ ಮೂಲಕ ದರಖಾಸ್ತು ಪೋಡಿ ವಿತರಣೆ ಮಾಡಿದ್ದೇವೆ. ಈ ಹಿಂದೆ ಯಾವುದೇ ಸರ್ಕಾರವು ಇಂತಹ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಗಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಯಾವಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆಯೋ ಆ ಸಂದರ್ಭದಲ್ಲಿ ಬಡವರ ಬದುಕು ಬದಲಾಯಿಸುವ ಕಾರ್ಯಕ್ರಮವನ್ನು ರೂಪಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.

ನಮ್ಮ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರು ಮತ್ತು ಅವರ ಕುಟುಂಬ ಒಂದು ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್‌ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ನಾನು ಬಂದಾಗ ಯಾರು ಸಹಾಯ ಮಾಡುವವರು ಇರಲಿಲ್ಲ. ಬಿಜೆಪಿ ಸರ್ಕಾರವಿದ್ದರೂ ಸಹಾಯ ಮಾಡಲಿಲ್ಲ. ಆಗ ಅವರು 10 ಕೋಟಿ ರೂ. ಹಣವನ್ನು ಕೊಟ್ಟು ಲಸಿಕೆಯನ್ನು ದಾವಣಗೆರೆ ಜನರಿಗಾಗಿ ಹಂಚಿ ಮಾನವೀಯತೆ ಮೆರೆದಿದ್ದರು. ಅಂತಹ ಹೃದಯ ಶ್ರೀಮಂತಿಕೆ ಇರುವವರು ನಮ್ಮ ಶಾಮನೂರು ಶಿವಶಂಕರಪ್ಪನವರು. ಇಂದು ಅವರ 95ನೇ ಜನ್ಮೋತ್ಸವ ಸಂಭ್ರಮ ಆಚರಿಸಿದ್ದೇವೆ. ಅಂದಿನಿಂದ ಇಂದಿನವರೆಗೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರು ಹಲವು ಕ್ಷೇತ್ರದಲ್ಲಿ ಸಾಧನೆಗೈದು ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿಯನ್ನು ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending