ದಿನದ ಸುದ್ದಿ
ಜಗಳೂರು : ಬಿದರಕೆರೆಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
ಸುದ್ದಿದಿನ,ದಾವಣಗೆರೆ: ಜಿಲ್ಲಾಡಳಿತದಿಂದ ಇದೇ ತಿಂಗಳ 18 ರಂದು ಜಗಳೂರು ತಾಲ್ಲೂಕಿನ ಬಿದರಕೆರೆಯಲ್ಲಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ, ಬರ ಪರಿಹಾರ, ಅತಿವೃಷ್ಟಿ, ಪಹಣಿ ಲೋಪದೋಷ ತಿದ್ದುಪಡಿ ಸೌಲಭ್ಯ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243