ದಿನದ ಸುದ್ದಿ
ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1.99 ಕೋಟಿ
ಸುದ್ದಿದಿನ,ದಾವಣಗೆರೆ:ಬರುವ ಆರ್ಥಿಕ ವರ್ಷಕ್ಕೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1,99,80000 ಗಳ ಬಜೆಟ್ ನೀಡಿ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಚಮನ್‍ಸಾಬ್ ಅನುಮೋದನೆ ನೀಡಿದ್ದಾರೆ ಎಂದು ನಗರ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಮಂಗಳವಾರ (ಫೆ.18) ರಂದು ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಆಯವ್ಯಯ ಸಭೆಯಲ್ಲಿ ಬಜೆಟ್‍ಗೆ ಅನುಮೋದನೆ ನೀಡಲಾಯಿತು. ದೇವರಾಜ ಅರಸ್ ಬಡಾವಣೆ ಗ್ರಂಥಾಲಯದ ವಿಸ್ತರಣೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ನಿರ್ವಹಿಸಲು ಅನುಮೋದನೆ ನೀಡಿದರು. ಬಡಾವಣೆ ಪೊಲೀಸ್ ಠಾಣೆ ಎದುರಿಗಿರುವ ಸಿಲ್ವರ್ ಜ್ಯುಬಿಲಿ ಶಾಖಾ ಗ್ರಂಥಾಲಯಕ್ಕೆ ಓದುಗರ ಅನುಕೂಲಕ್ಕೆ ಬೋರ್ ವೆಲ್ ಕೊರೆಸಲು ಅನುಮೋದನೆ ನೀಡಿದ್ದಲ್ಲದೇ ಸ್ಥಳದಲ್ಲಿಯೇ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಶ್ರೀನಿವಾಸ ಎಸ್., ದ.ರಾ.ಮ ವಿಜ್ಞಾನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಗೋವಿಂದರಾಜು ಎಲ್, ರಾಜನಹಳ್ಳಿ ಸೀತಮ್ಮ ಬಾಲಕೀಯರ ಪ್ರೌಡಶಾಲೆಯ ಮುಖ್ಯೋಪಾದ್ಯಾಯರಾದ ಮಂಜಪ್ಪ ಎ.ಆರ್ ಹಾಗೂ ಗ್ರಂಥಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243