ದಿನದ ಸುದ್ದಿ

ಬಂಜರು ಭೂಮಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ಅಗತ್ಯ : ಕೇಂದ್ರ ಸಚಿವ ಗಿರಿರಾಜ್ ಸಿಂಗ್

Published

on

ಸುದ್ದಿದಿನ ಡೆಸ್ಕ್ : 2050ರ ವೇಳೆಗೆ ಆಹಾರ ಉತ್ಪಾದನಾ ವಲಯದಲ್ಲಿ ದೇಶ ಸ್ವಾವಲಂಬನೆ ಸಾಧಿಸಬೇಕಾದರೆ ಬಹಳ ದೊಡ್ಡ ಪ್ರಮಾಣದಲ್ಲಿ ಬಂಜರು ಭೂಮಿ ಅಭಿವೃದ್ಧಿ ಪಡಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿ ವಿಶ್ವ ಬ್ಯಾಂಕ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಲಾನಯನ ಪ್ರದೇಶ ಅಭಿವೃದ್ಧಿಪಡಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವರು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜೈ ಜವಾನ್ ಜೈ ಕಿಸಾನ್ ಎಂಬುದು ಬಹಳ ಹಿಂದಿನ ಘೋಷಣೆಯಾಗಿದ್ದರೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಜೈ ವಿಜ್ಞಾನ್ ಎಂಬ ಹೊಸ ಪರಿಕಲ್ಪನೆ ಮೂಲಕ ದೇಶ ಸಮಗ್ರ ಪ್ರಗತಿಯತ್ತ ದಾಪುಗಾಲು ಹಾಕುವಂತೆ ಮಾಡಿದ್ದಾರೆ ಎಂದು ಹೇಳಿದರು. ಭವಿಷ್ಯದಲ್ಲಿ ನೀರು ಪೋಲಾಗದಂತೆ ಪ್ರತಿಯೊಬ್ಬರು ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version