ದಿನದ ಸುದ್ದಿ

ಜೈವಿಕ ಹಾಗೂ ನೈಸರ್ಗಿಕ ಕೃಷಿಗೆ ಹೆಚ್ಚಿನ ಒತ್ತು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Published

on

ಸುದ್ದಿದಿನ,ಚಿಕ್ಕಮಗಳೂರು : ಜೈವಿಕ ಹಾಗೂ ನೈಸರ್ಗಿಕ ಕೃಷಿ ಕಡೆಗೆ ಗಮನ ಹರಿಸುವುದು ಅತ್ಯಗತ್ಯವಾಗಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಚಿಕ್ಕಮಗಳೂರು ನಗರದ ಆದಿ ಚುಂಚನಗಿರಿ ವಿದ್ಯಾಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭೂಮಿಗೆ ಹೆಚ್ಚು ರಾಸಾಯನಿಕ ಬಳಸುವುದರಿಂದ ಭೂಮಿಯ ಫಲವತ್ತತೆ ಕಡಿಮೆಯಾಗುವುದರ ಜೊತೆಗೆ ರೋಗ ರುಜಿನಗಳಿಗೆ ಕಾರಣವಾಗುತ್ತದೆ.

ನಮ್ಮ ಭೂಮಿಯ ಮಣ್ಣು, ಗಾಳಿ ಪರಿಸರವು ಸಹ ರಾಸಾಯನಿಕದಿಂದ ಕಲುಷಿತವಾಗುತ್ತಿದ್ದು, ಅದರಿಂದ ಕಾಯಿಲೆಗಳು ಹೆಚ್ಚಾಗುತ್ತಿವೆ. ಪ್ರಪಂಚದಲ್ಲಿ ಜನತೆ ಜೈವಿಕ ಕೃಷಿಯತ್ತ ಗಮನ ನೀಡುತ್ತಿದ್ದಾರೆ.ಈ ಸಂದರ್ಭದಲ್ಲಿ ನಾವು ಸಹ ಜೈವಿಕ ಕೃಷಿಗೆ ಆದ್ಯತೆ ನೀಡಿ ನೈಸರ್ಗಿಕ ಕೃಷಿ ಪದ್ಧತಿಯನ್ನು ಮಾಡುವುದರಿಂದ ರೋಗ ಮುಕ್ತ ಸಮಾಜ ನಿರ್ಮಾಣಕ್ಕೂ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಕೇಂದ್ರ ಸರ್ಕಾರ ಒಂದು ವಿಶೇಷ ಯೋಜನೆಯನ್ನು ಗುಜರಾತ್‌ನಲ್ಲಿ ಜಾರಿಮಾಡಿದ್ದು, ಮುಂದಿನ ದಿನಗಳಲ್ಲಿ ದೇಶಾದ್ಯಂತ ವಿಸ್ತರಿಸುವ ಕಾರ್ಯಕ್ರಮವಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version