ದಿನದ ಸುದ್ದಿ
‘ಹಸಿರು ಪಟಾಕಿ’ ಹಚ್ಚಿ ದೀಪಾವಳಿ ಆಚರಿಸಿ
ಸುದ್ದಿದಿನ, ಬೆಂಗಳೂರು:ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರವು ದೀಪಾವಳಿ ಹಬ್ಬಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸುಪ್ರೀಂಕೋರ್ಟ್ 2018ರ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಪಟಾಕಿಯನ್ನು ಮಾರಾಟ ಮಾಡುವಂತಿಲ್ಲ ಹಾಗೂ ಸಿಡಿಸುವಂತಿಲ್ಲ ಎಂದು ಆದೇಶ ಮಾಡಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿ ಪಡೆದ ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾರಟ ಮಾಡಬೇಕು ಎಂದು ಶುಕ್ರವಾರ ಆದೇಶಹೊರಡಿಸಿದ್ದರು.
ಈ ಹಿನ್ನೆಲೆಯಲ್ಲಿ ಹಸಿರು ಪಟಾಕಿ ಮಾರಾಟ ಮಳಿಗೆಗಳನ್ನು ನ.7ರಿಂದ 16ರ ವರೆಗೆ ಮಾತ್ರ ತೆರೆಯಬಹುದು. ನಾಗರಿಕರು ಸರಳವಾಗಿ ಮತ್ತು ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸಿ ಎಂದು ಸರ್ಕಾರ ಮನವಿ ಮಾಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243