ದಿನದ ಸುದ್ದಿ

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಸಲು ಸೂಚನೆ

Published

on

ಸುದ್ದಿದಿನ, ದಾವಣಗೆರೆ : ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಸಲು ಸರ್ಕಾರ ಸೂಚನೆ ನೀಡಿದ್ದು, ಜಿಲ್ಲೆಯ ಜಗಳೂರಿನಲ್ಲಿ ಶೇಂಗಾ ಖರೀದಿ ಕೇಂದ್ರ ಪ್ರಾರಂಭ ಮಾಡಲಾಗುವುದು. ಶೇಂಗಾ ಬೆಳೆಗೆ ಪ್ರತಿ ಕ್ವಿಂಟಾಲ್‍ಗೆ 5275 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.

ಪ್ರತಿ ಎಕರೆಗೆ 03 ಕ್ವಿಂ. ನಂತೆ ಪ್ರತಿ ರೈತರಿಂದ ಗರಿಷ್ಟ 15 ಕ್ವಿಂ. ಶೇಂಗಾ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ರೈತರ ನೊಂದಣಿ ಕಾರ್ಯ ಆರಂಭವಾಗಿದ್ದು, ನೊಂದಣಿ ಮಾಡಿಸಲು ನ. 21 ಕೊನೆಯ ದಿನವಾಗಿದೆ. ಫ್ರೂಟ್ಸ್ ದತ್ತಾಂಶದಲ್ಲಿ ನೊಂದಣಿಯಾಗಿರುವ ರೈತರಿಂದ ಮಾತ್ರ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಸಲಾಗುವುದು.

ಶೇಂಗಾ ಖರೀದಿಗೆ ಜಿಲ್ಲೆಯಲ್ಲಿ ಕೆಒಎಫ್ ಅನ್ನು ಖರೀದಿ ಏಜೆನ್ಸಿಯಾಗಿ ನಿಗದಿಪಡಿಸಲಾಗಿದ್ದು, ಜಿಲ್ಲೆಯಲ್ಲಿ ಶೇಂಗಾ ಖರೀದಿ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ನಿರ್ದೇಶನ ನೀಡಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿನಿರ್ದೇಶಕ ಮಂಟೆಸ್ವಾಮಿ, ಜಂಟಿಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಕೆಒಎಫ್ ವ್ಯವಸ್ಥಾಪಕ ಹನುಮಂತ ನಾಯಕ್ ಸೇರಿದಂತೆ ಕೃಷಿ ಮಾರಾಟ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version