ದಿನದ ಸುದ್ದಿ

ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು ಎಂದು ಅವರು ಹೇಳಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version