Connect with us

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : 76 ಲಕ್ಷಕ್ಕೂ ಅಧಿಕ ಯಶಸ್ವಿ ನೋಂದಣಿ

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಗೃಹ ಜ್ಯೋತಿ ಯೋಜನೆಗೆ 28-06-2023, ಬುಧವಾರ ಸಂಜೆ 4 ಗಂಟೆಯವರೆಗೆ 76,09,701 ಲಕ್ಷ ಅರ್ಜಿ ಸಲ್ಲಿಕೆಯಾಗುವ ಮೂಲಕ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ರಾಜ್ಯದ ಒಟ್ಟು 6 ವಿದ್ಯುತ್ ಕಂಪನಿಗಳಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ವೇಗ ಪಡೆದಿದ್ದು ಪ್ರತಿ ನಿತ್ಯ ಕನಿಷ್ಠ 10 ಲಕ್ಷಕ್ಕೂ ಹೆಚ್ಚು ಗ್ರಾಹಕರು ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಾರೆ.

ನೋಂದಣಿಗೆ ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿಲ್ಲ.
ರಾಜ್ಯದ ಇ-ಆಡಳಿತ ಗೃಹ ಜ್ಯೋತಿ ಯೋಜನೆಗೆ ಪ್ರತ್ಯೇಕವಾಗಿ ನೋಂದಣಿ ಲಿಂಕ್ ನೀಡಿದ ಬಳಿಕ ಅರ್ಜಿ ಸಲ್ಲಿಕೆಯು ದುಪ್ಪಟ್ಟಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲದೆ ವಿದ್ಯುತ್ ಕಛೇರಿ, ನಾಡಕಛೇರಿ ಹಾಗೂ ಕಂಪ್ಯೂಟರ್, ಲ್ಯಾಪ್’ಟಾಪ್, ಮೊಬೈಲ್ ಫೋನ್ ನಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಾಯಿಸಬಹುದು.

ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನೋಂದಣಿಗೆ ನಿಗದಿತ ಸೇವಾ ಶುಲ್ಕವನ್ನಷ್ಟೇ ಪಾವತಿಸಿ ನೋಂದಾಯಿಸಿಕೊಳ್ಳಬಹುದು. ಹೆಚ್ಚುವರಿ ಹಣಕ್ಕೆ ಯಾರಾದರೂ ಬೇಡಿಕೆಯಿಟ್ಟಲ್ಲಿ, ಗ್ರಾಹಕರು ಕೂಡಲೇ 24×7 ಸಹಾಯವಾಣಿ 1912 ಕ್ಕೆ ಕರೆಮಾಡಿ ತಿಳಿಸಬಹುದು. ಅಂತಹ ಪ್ರಯತ್ನಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
ನಕಲಿ ಲಿಂಕ್ ಗಳ ಬಗ್ಗೆ ಇರಲಿ ಎಚ್ಚರ: ಮೇಲ್ಕಂಡ ವೆಬ್ಸೈಟ್ ಹೊರತುಪಡಿಸಿ, ನೋಂದಣಿಗೆ ಯಾವುದೇ ಖಾಸಗಿ/ನಕಲಿ ವೆಬ್ಸೈಟ್ ಬಳಸದೇ ಇರುವುದು ಸೂಕ್ತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮ ಪಂಚಾಯಿತಿ ಸೇವೆಗಳು ಇನ್ನು ವಾಟ್ಸಪ್‍ನಲ್ಲಿ

Published

on

ಸುದ್ದಿದಿನ,ದಾವಣಗೆರೆ : ಗ್ರಾಮ ಪಂಚಾಯಿತಿ ಸೇವೆಗಳನ್ನು ಪಡೆಯಲು ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದ್ದು ಪಂಚಮಿತ್ರ ಸೇವೆಗಳನ್ನು ವಾಟ್ಸಪ್ ಚಾಟ್‍ನಲ್ಲಿ ಪಡೆಯಲು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡಿದರು.

ಅವರು ಭಾನುವಾರ ದಾವಣಗೆರೆ ತಾ; ದೊಡ್ಡಬಾತಿ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯಿತಿ ದೊಡ್ಡಬಾತಿ, ಹಳೆಬಾತಿಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಂಚಮಿತ್ರ ವಾಟ್ಸಪ್ ಸೇವೆಗೆ ಸಚಿವರು ಚಾಲನೆ ನೀಡಿದರು.

ಗ್ರಾಮೀಣ ಜನರಿಗೆ 89 ಸೇವೆಗಳನ್ನು ನೀಡುವ ಪಂಚಮಿತ್ರ ಪೋರ್ಟಲ್ ಮತ್ತು ವಾಟ್ಸಾಪ್ ಚಾಟ್ ಡಿಜಿಟಲ್ ವೇದಿಕೆಯ ಮೂಲಕ ಪಡೆಯಲು ಅವಕಾಶ ಕಲ್ಪಿಸಿದೆ. ಇದರ ಮೂಲಕ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ವಿವಿಧ 17 ಸೇವೆಗಳು, ಇತರೆ ಇಲಾಖೆಗಳಿಗೆ ಸಂಬಂಧಿಸಿದ 72 ಸೇವೆಗಳು ಈ ವೇದಿಕೆಯಲ್ಲಿ ಸಿಗಲಿವೆ. ಕಟ್ಟಡ ಪರನಾನಗಿ, ಹೊಸ ನೀರು ನಲ್ಲಿ ಸಂಪರ್ಕ, ಬೀದಿ ದೀಪ ನಿರ್ವಹಣೆ, ಸ್ವಾಧೀನ ಪ್ರಮಾಣ ಪತ್ರ, ವ್ಯಾಪಾರ ಪರವಾನಗಿ, ನಿರಾಕ್ಷೇಪಣಾ ಪತ್ರ, ಜಾಬ್ ಕಾರ್ಡ್ ವಿತರಣೆ ಸೇರಿದಂತೆ ಗ್ರಾಮ ಪಂಚಾಯಿತಿ ಸೇವೆಗಳನ್ನು ಇದರಲ್ಲಿ ಪಡೆಯಬಹುದಾಗಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಪಂಚಮಿತ್ರ ವಾಟ್ಸಪ್ ಸೇವೆಗಳ ಬಗ್ಗೆ ವಿವರಿಸಿದರು.

ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ, ದೊಡ್ಡಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ.ಡಿ ಇವರು ಅಧ್ಯಕ್ಷತೆ ವಹಿಸಿದ್ದರು. ಹಳೆಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೀತಾ ಆರ್, ದೊಡ್ಡಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಭಾನುವಳ್ಳಿ ಸಿದ್ದಪ್ಪ, ಹಳೇಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪ ಎ, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕರಿಬಸಪ್ಪ, ಗಿರೀಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಉಪವಿಭಾಗಾಧಿಕಾರಿ ದುರ್ಗಾಶ್ರೀ ಸ್ವಾಗತಿಸಿದರು.

ವೆಬ್ಸೈಟ್ ಲಿಂಕ್

https://prcrdpr.karnataka.gov.in/gallery/Panchamitra%20Portal/en

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಳ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಪಡಿತರ ವಿತರಕರಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿ ಹೆಚ್ಚಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಗುರುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ದಶಮಾನೋತ್ಸವ ಹಸಿವು ಮುಕ್ತ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ಕಾಯಕ ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆಯಾಗಿತ್ತು. ಆಹಾರ ಉತ್ಪಾದನೆ ಮಾಡುವವರು ಕಾಯಕ ಜೀವಿಗಳು ಹಸಿವಿನಿಂದ ಮಲಗಬಾರದು. 5 ಕೆ.ಜಿ. ಅಕ್ಕಿಗೆ ಬದಲಾಗಿ ಪ್ರತಿ ಕೆ.ಜಿ.ಗೆ 34 ರೂಪಾಯಿಯಂತೆ ಫಲಾನುಭವಿಗಳಿಗೆ ನೇರ ನಗದು ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಉದ್ದೇಶ ರಾಜ್ಯವನ್ನು ಹಸಿವು, ಅನಾರೋಗ್ಯ, ಅನಕ್ಷರತೆ, ನಿರುದ್ಯೋಗ ಮುಕ್ತ ಮಾಡುವುದೇ ಆಗಿದೆ. ಸರ್ಕಾರದ ಯೋಜನೆಗಳಿಂದ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ರಾಹಕ ರಕ್ಷಕ ತಪಾಸಣೆ ವಾಹನಗಳಿಗೆ ಚಾಲನೆ ಹಾಗೂ ತೂಕ ಮತ್ತು ಅಳತೆಗಳ ಗ್ರಾಹಕರ ಜಾಗೃತಿ ಕೈಪಿಡಿ ಬಿಡುಗಡೆ ಮಾಡಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending