ದಿನದ ಸುದ್ದಿ
ಇನ್ನು ನಾಲ್ಕು ದಿನಗಳಲ್ಲಿ ಎರಡು ಕಂತಿನ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ
ಸುದ್ದಿದಿನಡೆಸ್ಕ್:ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ(ಅ 3)ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ”ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ ಹಾಕುವುದು ವಿಳಂಬವಾಗಿತ್ತು. ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ.
ಈ ಹೆಣ್ಣು ಮಗಳು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243