ದಿನದ ಸುದ್ದಿ
ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ ಸಾಧನವಾಗಿದೆ. ಇದರ ಜಾರಿಯ ಬಳಿಕ ಬಡವರು ಮತ್ತು ಜನಸಾಮಾನ್ಯರಿಗೆ ಗಮನಾರ್ಹ ಉಳಿತಾಯವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಹೇಳಿದ್ದಾರೆ.
For us, reforms are a means to improve the lives of 140 crore Indians.
After the introduction of GST, goods for household use have become much cheaper.
This has resulted in significant savings for the poor and common man.
We are committed to continuing this journey of reforms… pic.twitter.com/dxh3BAYnHH
— Narendra Modi (@narendramodi) June 24, 2024
ಜಿಎಸ್‌ಟಿ ಜಾರಿಯಾದ ನಂತರ ಗೃಹಬಳಕೆಯ ವಸ್ತುಗಳು ಹೆಚ್ಚು ಅಗ್ಗವಾಗಿವೆ ಎಂದಿರುವ ಅವರು, ಜನರ ಜೀವನವನ್ನು ಪರಿವರ್ತಿಸುವ ಈ ಸುಧಾರಣೆಗಳ ಪ್ರಯಾಣವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ‘ಕುವೆಂಪು ಓದು : ಕಮ್ಮಟ’ ; ಚರ್ಚೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು

ಸುದ್ದಿದಿನ.ಚನ್ನಗಿರಿ: ಕನ್ನಡ ಸಂಸ್ಕೃತಿ ಇಲಾಖೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಾಗೂ ಶ್ರೀ ಶಿವಲಿಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯಕ್ತ ಆಶ್ರಯದಲ್ಲಿ ಬುಧವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಮ್ಮಟದ ಉದ್ಘಾಟನೆಯನ್ನು ಪ್ರಾಂಶುಪಾಲ ಅಮೃತೇಶ್ವರ ಬಿ.ಜಿ, ಮಾಡಿದರು. ಸಂಚಾಲಕಿ ಭಾರತೀದೇವಿ ಹಾಗೂ ಸಾಹಿತಿ ಡಾ.ಎಚ್.ಟಿ.ಕೃಷ್ಣಮೂರ್ತಿ ಕಮ್ಮಟವನ್ನು ನಡೆಸಿಕೊಟ್ಟರು. 50 ವಿದ್ಯಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸಿ ಚರ್ಚೆನಡೆಸಿದರು.
ಪ್ರಾಂಶುಪಾಲರಾದ ಡಾ.ಬಿ.ಜಿ. ಅಮೃತೇಶ್ವರ ಅವರು ಕಮ್ಮಟ ದ ಅಧ್ಯಕ್ಷತೆವಹಿಸಲಿದ್ದು, ಐ.ಕ್ಯು.ಎ.ಸಿ ಸಂಚಾಲಕರಾದ ವಿಜಯ್ ಕುಮಾರ್ ಎನ್.ಸಿ, ಇಂಗ್ಲಿಶ್ ವಿಭಾಗದ ಮುಖ್ಯಸ್ಥ ರಾದ ಜಯಪ್ಪ.ಸಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ರವಿ, ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್. ಹಾಗೂ ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿಯುಸಿ : ಸೈನ್ಸ್ ಅಕಾಡೆಮಿ ಪದವಿಪೂರ್ವ ಕಾಲೇಜಿಗೆ ಶೇ.93.52 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ: 2024-25 ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಸೈನ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜು, ದಾವಣಗೆರೆಯ ವಿದ್ಯಾರ್ಥಿಗಳು ಅತ್ಯತ್ತಮವಾದ ಫಲಿತಾಂಶ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ಕು.ಸುಷ್ಮಿತಾ ಕೆ.ಎಂ. ಒಟ್ಟಾರೆ 600 ಅಂಕಗಳಿಗೆ 574 ಅಂಕಗಳನ್ನು ಗಳಿಸಿ, 95.7% ಫಲಿತಾಂಶ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕು. ಆದ್ಯ ಎನ್. ಎಂ (569/600) 94.8%, ಫಲಿತಾಂಶದೊAದಿಗೆ ದ್ವಿತೀಯ ಸ್ಥಾನವನ್ನೂ, ಕು. ಮಧುಮಿತಾ ಎಂ. (568/600) 94.7% ತೃತೀಯ ಸ್ಥಾನವನ್ನೂ ಕು.ಡಿ.ಇ. ಸಂಜನಾ (567/600) 94.5%, ಹಾಗೂ ಕು.ಎಸ್.ಎ ರಾಹುಲ್ (566/600) 94.3% ಫಲಿತಾಂಶ ಪಡೆದು ಕ್ರಮವಾಗಿ ಕಾಲೇಜಿಗೆ ನಾಲ್ಕು ಹಾಗೂ ಐದನೇ ಸ್ಥಾನಗಳನ್ನು ಪಡೆದುಕೊಂಡಿರುತ್ತಾರೆ.
ಒಟ್ಟು ಕನ್ನಡ ಭಾಷಾ ವಿಷಯದಲ್ಲಿ 3 ವಿದ್ಯಾರ್ಥಿಗಳು, ಗಣಿತದಲ್ಲಿ 2 ವಿದ್ಯಾರ್ಥಿಗಳು, ಜೀವಶಾಸ್ತçದಲ್ಲಿ 1 ವಿದ್ಯಾರ್ಥಿ 100/100 ಅಂಕಗಳನ್ನು ಗಳಿಸಿರುತ್ತಾರೆ. ಒಟ್ಟಾರೆ 47 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ ವಿದ್ಯಾರ್ಥಿಗಳು 149 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಒಟ್ಟಾರೆ ಕಾಲೇಜಿಗೆ 93.52 % ಫಲಿತಾಂಶ ಬಂದಿದ್ದು, ಈ ಎಲ್ಲಾ ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
19 ವರ್ಷಗಳ ನಂತರ ಹಳೇ ಕುಂದುವಾಡದಲ್ಲಿ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ : ಜಗಮಗಿಸುತ್ತಿದೆ ಗ್ರಾಮ

ಸುದ್ದಿದಿನ,ದಾವಣಗೆರೆ: ಬೇಸಿಗೆ ಬಂತೆಂದರೆ ಸಾಕು ಜಾತ್ರಾ ಮಹೋತ್ಸವಗಳ ಸಂಭ್ರಮ ಪ್ರಾರಂಭವಾಗುತ್ತದೆ. ಆಯಾ ಗ್ರಾಮದ, ಗ್ರಾಮದೇವತೆಗಳ ಆರಾಧನೆಯನ್ನು ಜಾತ್ರಾ ಮೂಲಕ ವೈಭವದಿಂದ ಆಚರಿಸುವ ಪರಿ ಎಲ್ಲೆಡೆ ನಡೆಯುತ್ತದೆ.
ಅದೇ ರೀತಿ ದಾವಣಗೆರೆಯ ಹಳೇಕುಂದುವಾಡದಲ್ಲಿ ಗ್ರಾಮದೇವತೆ ಆದಿಪರಾಶಕ್ತಿಯಾದ ಶ್ರೀ ಮಾರಿಕಾಂಬಾ ಜಾತ್ರೆಯು ಏಪ್ರಿಲ್ 1 ರಂದು ಘಟಸ್ಥಾಪನೆ ಮಾಡುವುದರೊಂದಿಗೆ ಆರಂಭವಾಗಿದೆ. ಕಳೆದ 2007 ರಲ್ಲಿ ನಡೆದ ದೇವಿಯ ಜಾತ್ರೆ, 19 ವರ್ಷಗಳ ನಂತರ ಈ ಬಾರಿ ನಡೆಸುತ್ತಿರುವುದು ವಿಶೇಷವಾಗಿದೆ. ಪ್ರತಿ ದಿನ ದೇವಿಗೆ ವಿಶೇಷ ಪೂಜೆ, ಅಲಂಕಾರ ಮಾಡಲಾಗುತ್ತಿದ್ದು, ಭಕ್ತರು ದೇವಿಯನ್ನು ಭಕ್ತಿಯಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ. ಜಾತ್ರೆಯ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ಏಪ್ರಿಲ್ 12 ರವರೆಗೂ ಜರುಗಲಿದೆ ಎಂದು ಮಾರಿಕಾಂಬ ಜಾತ್ರಾ ಸಮಿತಿ ತಿಳಿಸಿದೆ.
19 ವರ್ಷಗಳ ನಂತರ ನಡೆಯುತ್ತಿರುವ ಮಾರಿಕಾಂಬಾ ಜಾತ್ರೆಗೆ ಹಳೇ ಕುಂದುವಾಡ ಗ್ರಾಮವು ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಗ್ರಾಮಸ್ಥರಲ್ಲಿ ಹುರುಪು ದುಪ್ಪಟ್ಟಾಗಿದೆ. ಊರಿನ ರಸ್ತೆಗಳು, ಮನೆ ಮನೆಗಳು ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದು, ಮಾರಿಕಾಂಬಾ ದೇವಸ್ಥಾನದ ದ್ವಾರ ಬಾಗಿಲ ಅಲಂಕಾರಗೊಂಡು, ಎಲ್ಲರನ್ನು ಆಕರ್ಷಿಸುತ್ತಿದೆ. ಐದು ಮಂಟಪಗಳು ವೈಭವಯುತವಾಗಿ ಸಿಂಗಾರಗೊಂಡಿದೆ. ಪ್ರಮುಖ ರಸ್ತೆಗಳು ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಊರಿನ ಮುಖ್ಯ ರಸ್ತೆಗಳು ಜಗಮಗಿಸುತ್ತಿವೆ, ರಸ್ತೆಯ ತುಂಬೆಲ್ಲಾ ಹಬ್ಬಕ್ಕೆ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳು ರಾರಾಜಿಸುತ್ತಿವೆ.
ಜಾತ್ರೆಯ ಹಿನ್ನಲೆ ಕುರಿ ಕಾಳಗ ಆಯೋಜಿಸಲಾಗಿತ್ತು. ಊರ ತುಂಬೆಲ್ಲಾ ನೆಂಟರು-ಇಷ್ಟರು ಬಂದಿಳಿದಿದ್ದು, ಸಸ್ಯಹಾರಿಗಳಿಗೆ ಮೃಷ್ಟಾನ್ನ ಭೋಜನಕ್ಕೆ ತಯಾರಿ ನಡೆದಿದ್ದರೆ, ಬಾಡೂಟಕ್ಕೆ ಸಾವಿರಾರು ಕುರಿಗಳನ್ನು ಖರೀದಿ ಮಾಡಲಾಗಿದೆ. ಊರಿಗೆ ಊರೇ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದೆ.
ಏ.8 ಮಂಗಳವಾರ ರಾತ್ರಿ ಚೌತಮನೆಯಿಂದ ಅಮ್ಮನ ದೇವಸ್ಥಾಕ್ಕೆ “ದೊಡ್ಡ ಎಡೆ” ಒಯ್ಯುವುದು ವಿಶೇಷ. ನಂತರ ಶ್ರೀ ಮಾರಿಕಂಬ “ರಥೋತ್ಸವವು” ಬಹು ವೈಭವದಿಂದ ಸಾಗಿ ಆಮ್ಮನ ಕಟ್ಟೆಯಲ್ಲಿ ಶ್ರೀ ದೇವಿಯ ಪ್ರತಿಷ್ಠಾಪನೆ, ಬೆಳಗಿನಜಾವ ಶ್ರೀ ದೇವಿಯ ಘಟ ಪೂಜೆ, ಮಹಾ ಪೂಜೆ ಹಾಗೂ ಗ್ರಾಮ ಪ್ರದಕ್ಷಿಣೆ, ಕಾರ್ಯಕ್ರಮಗಳು ಮಹಾಮಂಗಳಾರತಿಯೊಂದಿಗೆ ನಡೆಯುವುದು ವಾಡಿಕೆಯಾಗಿದೆ.
ಜಾತ್ರಾ ಪ್ರಯುಕ್ತ ಬುಧವಾರ ಶ್ರೀ ದೇವಿಗೆ ಗ್ರಾಮದ ಭಕ್ತರಿಂದ ಉಡಿ ತುಂಬಿಸುವುದು ಹಾಗೂ ಭಕ್ತರ ವಿವಿಧ ಸೇವಾ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 1 ರಿಂದ 6 ಘಂಟೆಯವರೆಗೆ ಪರಂಪರಾಗತ “ಹಾಸ್ಯಗಾರರಿಂದ” ಮನೋರಂಜನೆ ಕಾರ್ಯಕ್ರಮ ನಡೆಯಲಿದೆ.
ಏ. 10 ಗುರುವಾರ ಶ್ರೀದೇವಿಗೆ ಪೂಜೆ, ಮಹಾಮಂಗಳಾರತಿ, ಭಕ್ತರ ಸೇವಾ ಕಾರ್ಯಗಳು, ಮನೋರಂಜನೆ ಕಾರ್ಯಕ್ರಮ, ನಂತರ ಮಧ್ಯಾಹ್ನ 3 ರಿಂದ 6 ಘಂಟೆಯವರೆಗೆ “ಪೋತರಾಜ” ನಿಂದ ವಿವಿಧ ಕಾರ್ಯಕ್ರಮ ನಡೆಯಲಿದೆ. ನಂತರ “ರಸಮಂಜರಿ” ಕಾರ್ಯಕ್ರಮಗಳು ಜರುಗಲಿದೆ.
ಏ.11 ರಂದು ಶ್ರೀ ದೇವಿಗೆ ಪೂಜೆ, ಮಹಾಮಂಗಳಾರತಿ, ಮನೋರಂಜನೆ ಕಾರ್ಯಕ್ರಮ ನಡೆದು, ಸಾಯಂಕಾಲ `ಹುಲುಸು’ ಹೊಡೆಯಲಾಗುವುದು. ಏ.12 ರಂದು ಶ್ರೀ ದೇವಿಯ ‘ಮೋಚು” ವ ಕಾರ್ಯಕ್ರಮದೊಂದಿಗೆ (ಬಳೆ ತೆಗೆಯುವುದು) ಶ್ರೀ ಮಾರಿಕಾಂಬದೇವಿ ಜಾತ್ರೆಯ ಕಾರ್ಯಕ್ರಮ ಮುಕ್ತಾಯಗೊಳ್ಳುವುದು ಎಂದು ಶ್ರೀ ಮಾರಿಕಾಂಬದೇವಿ ಜಾತ್ರಾ ಉತ್ಸವ ಸಮಿತಿಯ ಸದಸ್ಯರು ಹಾಗೂ ಹಳೇಕುಂದುವಾಡ ಗ್ರಾಮಸ್ಥರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ದಾವಣಗೆರೆ | ನಾಳೆ ಡಾ.ಬಾಬು ಜಗಜೀವನ ರಾಂ 118ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ6 days ago
ಹಂಪಿ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ; ನಾಡೋಜ ಗೌರವ ಪದವಿ ಪ್ರದಾನ
-
ದಿನದ ಸುದ್ದಿ5 days ago
ಮೇ11 ರಂದು ಗ್ರಾಮ ಪಂಚಾಯತಿ ಚುನಾವಣೆ
-
ದಿನದ ಸುದ್ದಿ6 days ago
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
-
ಅಂಕಣ3 days ago
ಕವಿತೆ | ಚಳಿಗಾಲದ ಎರಡು ಜೀವರಸಗಳು
-
ದಿನದ ಸುದ್ದಿ3 days ago
ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತದೊಂದಿಗೆ ‘ಉಮ್ಮೀದ್ -2024’ ಕಾಯ್ದೆಯಾಗಿ ಜಾರಿ
-
ದಿನದ ಸುದ್ದಿ5 days ago
ಸಾಮಾಜಿಕ ಸುಧಾರಣೆಗೆ ಡಾ. ಬಾಬು ಜಗಜೀವನ್ರಾಂ ಕೊಡುಗೆ ಅಪಾರ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ3 days ago
ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ : ಅನುದಾನ ಬಿಡುಗಡೆಗೆ ಆರ್. ಅಶೋಕ್ ಒತ್ತಾಯ