ದಿನದ ಸುದ್ದಿ
ಏಪ್ರಿಲ್ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ

ಸುದ್ದಿದಿನ ಡೆಸ್ಕ್ : ಸರಕು ಮತ್ತು ಸೇವಾ ತೆರಿಗೆ-ಜಿಎಸ್‌ಟಿ ಸಂಗ್ರಹ 2022ರ ಏಪ್ರಿಲ್ ತಿಂಗಳಲ್ಲಿ ಸರ್ವಕಾಲಿಕ ದಾಖಲೆ ನಿರ್ಮಿಸಿದೆ. ಈ ತಿಂಗಳಲ್ಲಿ ಸುಮಾರು 1 ಲಕ್ಷ 68 ಸಾವಿರ ಕೋಟಿ ರೂಪಾಯಿಗಳಷ್ಟು ಜಿಎಸ್‌ಟಿ ಸಂಗ್ರಹವಾಗಿದೆ.
ಏಪ್ರಿಲ್ ತಿಂಗಳಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹ 1 ಲಕ್ಷ 67ಸಾವಿರದ 540 ಕೋಟಿ ರೂಪಾಯಿ ಸಂಗ್ರಹವಾಗಿದೆ. ಮಾರ್ಚ್ ತಿಂಗಳಲ್ಲಿ 1 ಲಕ್ಷ 42 ಸಾವಿರದ 95 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದ್ದರೆ, ಏಪ್ರಿಲ್‌ನಲ್ಲಿ 25ಸಾವಿರ ಕೋಟಿ ರೂಪಾಯಿಗೂ ಅಧಿಕ ಜಿಎಸ್‌ಟಿ ಸಂಗ್ರಹವಾಗಿದೆ.
ಏಪ್ರಿಲ್ ತಿಂಗಳಲ್ಲಿ ಕೇಂದ್ರೀಯ ಜಿಎಸ್‌ಟಿ ಸಂಗ್ರಹ 30ಸಾವಿರದ 159 ಕೋಟಿ ರೂಪಾಯಿಗಳಾಗಿದ್ದಾರೆ. ರಾಜ್ಯ ಜಿಎಸ್‌ಟಿ 41ಸಾವಿರದ 793 ಕೋಟಿ ರೂಪಾಯಿಗಳಾಗಿದೆ. ಏಕೀಕೃತ ಜಿಎಸ್‌ಟಿ 81ಸಾವಿರದ 939ಕೋಟಿ ರೂಪಾಯಿಗಳಾಗಿದೆ ಮತ್ತು ಸೆಸ್ ಸಂಗ್ರಹ 10ಸಾವಿರದ 649ಕೋಟಿ ರೂಪಾಯಿಗಳಿಷ್ಟಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಕಳೆದ ವರ್ಷ ಇದೇ ತಿಂಗಳಲ್ಲಿ ಜಿಎಸ್‌ಟಿ ಆದಾಯಕ್ಕಿಂತ ಪ್ರಸಕ್ತ ವರ್ಷದ ಏಪ್ರಿಲ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್‌ಟಿ ಪ್ರಮಾಣ ಶೇಕಡ20 ರಷ್ಟು ಹೆಚ್ಚಾಗಿದೆ ಎಂದು ಸಚಿವಾಲಯ ತಿಳಿಸಿದೆ. ಏಪ್ರಿಲ್ ತಿಂಗಳಲ್ಲಿ ಸರಕುಗಳ ಆಮದಿನಿಂದ ಸಂಗ್ರಹವಾಗಿರುವ ಆದಾಯ ಶೇಕಡ 30ರಷ್ಟು ಹೆಚ್ಚಾಗಿದ್ದು, ದೇಶೀಯವಾಗಿ ವಹಿವಾಟು ನಡೆಸಿದ್ದರಿಂದ ಶೇಕಡ 17ರಷ್ಟು ಆದಾಯ ಹೆಚ್ಚಾಗಿದೆ.
ಇದೇ ಮೊದಲ ಬಾರಿಗೆ ನಿವ್ವಳ ಜಿಎಸ್‌ಟಿ ಸಂಗ್ರಹ 1ಲಕ್ಷ 50 ಸಾವಿರ ಕೋಟಿ ರೂಪಾಯಿ ದಾಟಿದೆ ಎಂದು ಸಚಿವಾಲಯ ತಿಳಿಸಿದೆ. 2022ರ ಮಾರ್ಚ್ ಅಂತ್ಯದ ವೇಳೆಗೆ ಒಟ್ಟು7.7ಕೋಟಿ ರೂಪಾಯಿ ಮೌಲ್ಯದ ಬಿಲ್‌ಗಳು ಸ್ವೀಕೃತವಾಗಿದೆ ಎಂದು ಸಚಿವಾಲಯ ತಿಳಿಸಿದೆ.
GST Revenue collection for April 2022 highest ever at Rs 1.68 lakh crore
Gross GST collection in April 2022 is all time high, Rs 25,000 crore more that the next highest collection of Rs. 1,42,095 crore, just last month
Read more ➡️ https://t.co/rXElYMTUSB pic.twitter.com/lTbjqa3wvz
— Ministry of Finance (@FinMinIndia) May 1, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಯಲಕ್ಷ್ಮಿ ಕಾರಂತ್ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ಅಲರ್ಟ್..!

- ಸುನೀತ ಕುಶಾಲನಗರ
ನದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.
ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .
ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.
ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.
ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು
ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!
ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.
ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ
-
ದಿನದ ಸುದ್ದಿ7 days ago
ಅಮಾನವೀಯ ಕೃತ್ಯ | ಹೆಣ್ಣು ಮಗು ಮಾರಾಟ ಮಾಡಿದ ಪೋಷಕರು
-
ಅಂಕಣ7 days ago
ಸಿದ್ಧಾಂತ ಮತ್ತು ಪತ್ರಿಕೋದ್ಯಮ
-
ದಿನದ ಸುದ್ದಿ6 days ago
ದಾವಣಗೆರೆ | ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ, 81 ಕೇಂದ್ರಗಳಲ್ಲಿ 22579 ವಿದ್ಯಾರ್ಥಿಗಳು
-
ದಿನದ ಸುದ್ದಿ6 days ago
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್
-
ಅಂಕಣ4 days ago
ಕವಿತೆ | ಅಲರ್ಟ್..!
-
ದಿನದ ಸುದ್ದಿ2 days ago
ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಜಯಲಕ್ಷ್ಮಿ ಕಾರಂತ್ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ