ದಿನದ ಸುದ್ದಿ

ಏಪ್ರಿಲ್ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ

Published

on

ಸುದ್ದಿದಿನ ಡೆಸ್ಕ್ : ಸರಕು ಮತ್ತು ಸೇವಾ ತೆರಿಗೆ-ಜಿಎಸ್‌ಟಿ ಸಂಗ್ರಹ 2022ರ ಏಪ್ರಿಲ್ ತಿಂಗಳಲ್ಲಿ ಸರ್ವಕಾಲಿಕ ದಾಖಲೆ ನಿರ್ಮಿಸಿದೆ. ಈ ತಿಂಗಳಲ್ಲಿ ಸುಮಾರು 1 ಲಕ್ಷ 68 ಸಾವಿರ ಕೋಟಿ ರೂಪಾಯಿಗಳಷ್ಟು ಜಿಎಸ್‌ಟಿ ಸಂಗ್ರಹವಾಗಿದೆ.

ಏಪ್ರಿಲ್ ತಿಂಗಳಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹ 1 ಲಕ್ಷ 67ಸಾವಿರದ 540 ಕೋಟಿ ರೂಪಾಯಿ ಸಂಗ್ರಹವಾಗಿದೆ. ಮಾರ್ಚ್ ತಿಂಗಳಲ್ಲಿ 1 ಲಕ್ಷ 42 ಸಾವಿರದ 95 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದ್ದರೆ, ಏಪ್ರಿಲ್‌ನಲ್ಲಿ 25ಸಾವಿರ ಕೋಟಿ ರೂಪಾಯಿಗೂ ಅಧಿಕ ಜಿಎಸ್‌ಟಿ ಸಂಗ್ರಹವಾಗಿದೆ.

ಏಪ್ರಿಲ್ ತಿಂಗಳಲ್ಲಿ ಕೇಂದ್ರೀಯ ಜಿಎಸ್‌ಟಿ ಸಂಗ್ರಹ 30ಸಾವಿರದ 159 ಕೋಟಿ ರೂಪಾಯಿಗಳಾಗಿದ್ದಾರೆ. ರಾಜ್ಯ ಜಿಎಸ್‌ಟಿ 41ಸಾವಿರದ 793 ಕೋಟಿ ರೂಪಾಯಿಗಳಾಗಿದೆ. ಏಕೀಕೃತ ಜಿಎಸ್‌ಟಿ 81ಸಾವಿರದ 939ಕೋಟಿ ರೂಪಾಯಿಗಳಾಗಿದೆ ಮತ್ತು ಸೆಸ್ ಸಂಗ್ರಹ 10ಸಾವಿರದ 649ಕೋಟಿ ರೂಪಾಯಿಗಳಿಷ್ಟಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ಕಳೆದ ವರ್ಷ ಇದೇ ತಿಂಗಳಲ್ಲಿ ಜಿಎಸ್‌ಟಿ ಆದಾಯಕ್ಕಿಂತ ಪ್ರಸಕ್ತ ವರ್ಷದ ಏಪ್ರಿಲ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್‌ಟಿ ಪ್ರಮಾಣ ಶೇಕಡ20 ರಷ್ಟು ಹೆಚ್ಚಾಗಿದೆ ಎಂದು ಸಚಿವಾಲಯ ತಿಳಿಸಿದೆ. ಏಪ್ರಿಲ್ ತಿಂಗಳಲ್ಲಿ ಸರಕುಗಳ ಆಮದಿನಿಂದ ಸಂಗ್ರಹವಾಗಿರುವ ಆದಾಯ ಶೇಕಡ 30ರಷ್ಟು ಹೆಚ್ಚಾಗಿದ್ದು, ದೇಶೀಯವಾಗಿ ವಹಿವಾಟು ನಡೆಸಿದ್ದರಿಂದ ಶೇಕಡ 17ರಷ್ಟು ಆದಾಯ ಹೆಚ್ಚಾಗಿದೆ.

ಇದೇ ಮೊದಲ ಬಾರಿಗೆ ನಿವ್ವಳ ಜಿಎಸ್‌ಟಿ ಸಂಗ್ರಹ 1ಲಕ್ಷ 50 ಸಾವಿರ ಕೋಟಿ ರೂಪಾಯಿ ದಾಟಿದೆ ಎಂದು ಸಚಿವಾಲಯ ತಿಳಿಸಿದೆ. 2022ರ ಮಾರ್ಚ್ ಅಂತ್ಯದ ವೇಳೆಗೆ ಒಟ್ಟು7.7ಕೋಟಿ ರೂಪಾಯಿ ಮೌಲ್ಯದ ಬಿಲ್‌ಗಳು ಸ್ವೀಕೃತವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version