Connect with us

ದಿನದ ಸುದ್ದಿ

ಜಿ ಎಸ್ ಟಿ ವಿರೋಧಿಸಿ ಸಿಎಐಟಿ ಫೆ. 26ರಂದು ಭಾರತ್ ಬಂದ್ ಗೆ ಕರೆ : ಎಐಟಿಡಬ್ಲ್ಯುಎ ಬೆಂಬಲ

Published

on

ಸುದ್ದಿದಿನ, ಬೆಂಗಳೂರು : ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ವಿರುದ್ಧ ಕಾನ್ಫಿಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ಈ ತಿಂಗಳ 26ರಂದು ಕರೆ ನೀಡಿರುವ ಭಾರತ ಬಂದ್‍ಗೆ ಭಾರತದ ರಸ್ತೆ ಸಾರಿಗೆ ವಲಯದ ಅತ್ಯುನ್ನತ ಸಂಸ್ಥೆಗಳಲ್ಲೊಂದಾದ ಆಲ್ ಇಂಡಿಯಾ ಟ್ರಾನ್ಸ್ಪೋರ್ಟರ್ಸ್ ವೆಲ್ಫೇರ್ ಅಸೋಸಿಯೇಶನ್ (ಎಐಟಿಡಬ್ಲ್ಯುಎ) ಬೆಂಬಲ ಫೋಷಿಸಿದೆ. ಅದೇ ದಿನ ಛಕ್ಕಾ ಜಾಮ್ ಅಥವಾ ರಸ್ತೆ ತಡೆ ನಡೆಸಲು ನಿರ್ಧರಿಸಲಾಗಿದೆ.

“ಇಂಧನ ದರ ಏರಿಕೆ ಮತ್ತು ಭಾರತ ಸರ್ಕಾರ ಜಾರಿಗೆ ತಂದಿರುವ ಹೊಸ ಇ-ವೇ ಬಿಲ್ ಕಾನೂನುಗಳ ವಿರುದ್ಧ ಎಐಟಿಡಬ್ಲ್ಯುಎ ಕರೆ ನೀಡಿರುವ ಒಂದು ದಿನದ ಸಾರಿಗೆ ಅಸಹಕಾರಕ್ಕೆ ಎಲ್ಲ ರಾಜ್ಯಮಟ್ಟದ ಸಾರಿಗೆ ಸಂಘಗಳು ಬೆಂಬಲ ದೃಢಪಡಿಸಿವೆ. ಪ್ರತಿಭಟನೆಯ ಸ್ವರೂಪ ಎಲ್ಲ ಬುಕ್ಕಿಂಗ್ ತಿರಸ್ಕರಿಸುವುದು ಮತ್ತು ಇ-ಬಿಲ್ ಕೇಂದ್ರಿತ ಸರಕುಗಳ ಸಾಗಾಣಿಕೆಯನ್ನು ಒಂದು ದಿನ ತಿರಸ್ಕರಿಸುವುದ್ದಾಗಿರುತ್ತದೆ.

ಎಲ್ಲ ಸಾರಿಗೆ ಕಂಪನಿಗಳು ಸಾಂಕೇತಿಕ ಪ್ರತಿಭಟನಾರ್ಥವಾಗಿ ಬೆಳಿಗ್ಗೆ 6ರಿಂದ ರಾತ್ರಿ 8ರವರೆಗೆ ಟ್ರಕ್‍ಗಳನ್ನು ನಿಲ್ಲಿಸಲು ಕೋರಲಾಗಿದೆ. ಎಲ್ಲ ಸಾರಿಗೆ ಗೋದಾಮುಗಳು ಪ್ರತಿಭಟನೆ ಬ್ಯಾನರ್‍ಗಳನ್ನು ಪ್ರದರ್ಶಿಸಲಿವೆ. 2021ರ ಫೆಬ್ರುವರಿ 26ರಂದು ಯಾವುದೇ ಸರಕು ಸಾಗಾಣಿಕೆ ಬುಕ್ಕಿಂಗ್ ಮಾಡದಂತೆ ಅಥವಾ ಲೋಡ್ ಮಾಡದಂತೆ ಎಲ್ಲ ಗ್ರಾಹಕರಿಗೆ ಸಾರಿಗೆ ಕಂಪನಿಗಳು ಮನವಿ ಮಾಡಿಕೊಳ್ಳಲಿವೆ” ಎಂದು ಎಐಟಿಡಬ್ಲ್ಯುಎ ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ಆರ್ಯ ಪ್ರಕಟಣೆಯಲ್ಲಿ ಹೇಳಿದ್ದಾರೆ.

ದೇಶಾದ್ಯಂತ ಸರಕು ಸಾಗಾಣಿಕೆದಾರರು ಇತ್ತೀಚೆಗೆ ತಿದ್ದುಪಡಿ ತಂದಿರುವ ಜಿಎಸ್‍ಟಿ ಕಾನೂನುಗಳನ್ನು ಬಳಸುತ್ತಾ ಬಂದಿದ್ದರೆ. ಇದು ಅಂತರ ರಾಜ್ಯ ಮತ್ತು ರಾಜ್ಯದೊಳಗೆ ಸರಕು ಸಾಗಾಣಿಕೆಗೆ ಇರುವ ಇ-ವೇ ಬಿಲ್‍ಗಳ ಮಾನ್ಯತೆಯನ್ನು ದಿನಕ್ಕೆ 200 ಕಿಲೋಮೀಟರ್‍ಗಳಿಂದ 100 ಕಿಲೋಮೀಟರ್‍ಗೆ ಅರ್ಧ ಮಾಡಿದೆ. ಸಿಜಿಎಸ್‍ಟಿ ಕಾಯ್ದೆ-2017ರ ಸೆಕ್ಷನ್ 129ರ ಅನ್ವಯ ಅವಧಿ ಮೀರಿದ ಇ-ವೇ ಬಿಲ್‍ಗಳನ್ನು ಹೊಂದಿ, ಸರಕು ಸಾಗಾಣಿಕೆ ಮಾಡುವ ಟ್ರಕ್‍ಗಳಿಗೆ ವಿಧಿಸುವ ದಂಡ ಅಥವಾ ದೋಷಪೂರಿತ ಇ-ವೇ ಬಿಲ್ ಮೊತ್ತವಿರುವ ಪ್ರಕರಣಗಳಲ್ಲಿ ವಿಧಿಸುವ ದಂಡವನ್ನು ತೆರಿಗೆ ಮೊತ್ತದ ಪ್ರತಿಶತ 200 ಅಥವಾ ಇನ್‍ವೈಸ್ ಮೌಲ್ಯದ ಶೇಕಡ 100ರಷ್ಟು ಆಗಿರುತ್ತದೆ.

ಸಣ್ಣ ಹಾಗೂ ಮಧ್ಯಮ ಪ್ರಮಾಣದ ಸಾರಿಗೆದಾರರು ಅದರಲ್ಲೂ ಮುಖ್ಯವಾಗಿ ಸರಕುಗಳ ಭಾಗಶಃ ಲೋಡ್ ಸಾಗಾಣಿಕೆ ಮಾಡುವ ಸಾಗಾಣಿಕೆದಾರರು ಅಥವಾ ಚಿಲ್ಲರೆ ಸಾಗಾಣಿಕೆದಾರರು ಹೊಸ ನಿಯಮಾವಳಿಗೆ ಬದ್ಧರಾದಲ್ಲಿ, ಅವರ ಮೇಲಿನ ಬದ್ಧತೆಯ ಹೊರೆ ಅಧಿಕ ಹಾಗೂ ದುಬಾರಿಯಾಗಲಿದೆ. ಪರಿಸ್ಥಿತಿಗೆ ಅನುಗುಣವಾದ ವಿಳಂಬಕ್ಕೆ ಲಕ್ಷಾಂತರ ರೂಪಾಯಿ ದಂಡ ಪಾವತಿಸಬೇಕಾಗುತ್ತದೆ. ಇದು ಇಡೀ ವಹಿವಾಟು ಮುಚ್ಚಲು ಕಾರಣವಾಗಲಿದೆ.

ಸಾರಿಗೆ ಉದ್ಯಮದ ವಿವಿಧ ಸಮಸ್ಯೆಗಳ ವಿಚಾರದಲ್ಲಿ ಎಐಟಿಡಬ್ಲ್ಯುಎ ಭಾರತ ಸರ್ಕಾರಕ್ಕೆ ಪತ್ರಗಳನ್ನು ಬರೆದಿದೆ. ಮುಖ್ಯವಾಗಿ ಜಿಎಸ್‍ಟಿಯಡಿಯಲ್ಲಿ ಕಾರ್ಯಸಾಧುವಲ್ಲದ ಇ-ವೇ ಬಿಲ್ ಮತ್ತು ಡೀಸೆಲ್ ಬೆಲೆ ನೀತಿಯ ವಿರುದ್ಧ ಧ್ವನಿ ಎತ್ತಿದೆ. “ಜಿಎಸ್‍ಟಿಯಡಿ ಇ-ವೇ ಬಿಇಲ್ ನಿಯಮವಳಿಯನ್ನು ರದ್ದುಪಡಿಸುವಂತೆ ಎಐಟಿಡಬ್ಲ್ಯುಎ ಆಗ್ರಹಿಸುತ್ತದೆ.

ಏಕೆಂದರೆ ಹೊಸದಾಗಿ ಜಾರಿಗೆ ತಂದಿರುವ ಇ-ಇನ್‍ವೈಸ್, ತೆರಿಗೆ ಕಳ್ಳತನವನ್ನು ತಪ್ಪಿಸಲು ಸಕಾಗುತ್ತದೆ. ಫಾಸ್ಟ್ಯಾಗ್ ಸಂಪರ್ಕವನ್ನು ಇ-ಇನ್‍ವೈಸ್ ಜತೆಗೆ ಜೋಡಿಸುವ ಮೂಲಕ ಸರ್ಕಾರ ವಾಹನಗಳ ಚಲನೆಯ ಮೇಲೆ ನಿಗಾ ಇಡಬಹುದು. ಆವುದೇ ಸಮಯ ಆಧರಿತ ಬದ್ಧತೆ ಗುರಿಗಳ ವಿಚಾರದಲ್ಲಿ ಸರ್ಕಾರದ ದಂಡಗಳಿಗೆ ಸಾಗಾಣಿಕೆದಾರರು ಗುರಿಯಾಗಬಾರದು.

ಡೀಸೆಲ್ ಬೆಲೆಗಳನ್ನು ಉಳಿಸಬೇಕು ಹಾಗೂ ಇದಕ್ಕೆ ಅಗತ್ಯವಾದ ಕಾರ್ಯವಿಧಾನವನ್ನು ಚರ್ಚಿಸಬೇಕು. ಭವಿಷ್ಯದ ನಿಯಂತ್ರಣಕ್ಕಾಗಿ ಸಾರಿಗೆ ಉದ್ಯಮದ ಜತೆ ಚರ್ಚಿಸಿ ನೀತಿ ರೂಪಿಸಬೇಕು. ದೇಶದ ಉದ್ದಗಲಕ್ಕೂ ಏಕರೂಪದ ಡೀಸೆಲ್ ಬೆಲೆ ನಿಗದಿಪಡಿಸಬೇಕು” ಎಂದು ಎಐಟಿಡಬ್ಲ್ಯುಎ ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ಆರ್ಯ ಒತ್ತಾಯಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending