ದಿನದ ಸುದ್ದಿ
ಜಿ.ಎಸ್.ಟಿ. ಪರಿಹಾರ; ಆಗಸ್ಟ್ ತಿಂಗಳಲ್ಲಿ ಅಂತಿಮ ನಿರ್ಣಯ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಚಂಡೀಗಢದಲ್ಲಿ ನಡೆದ ಜಿಎಸ್ಟಿ ಮಂಡಳಿಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಚರ್ಚೆ ನಡೆಸಲಾಗಿದ್ದು, ಕಾನೂನಿನ ತೊಡಕುಗಳನ್ನು ನಿವಾರಣೆ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಗಳಿಗೆ ಜಿಎಸ್ಟಿ ಪರಿಹಾರದ ಅವಧಿ ವಿಸ್ತರಣೆ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆಂದು ಮುಖ್ಯಮಂತ್ರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243