ರಾಜಕೀಯ
ಸರ್ಕಾರಿ ವಿವಿಗಳ ಕಾರ್ಯ ವೈಖರಿಗೆ ಜಿ.ಟಿ.ದೇವೇಗೌಡ ಅಸಮಾಧಾನ !
ಸುದ್ದಿದಿನ ಡೆಸ್ಕ್: ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಕಾಲೇಜುಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಸರ್ಕಾರಿ ವಿವಿಗಳ ಉಪಕುಲಪತಿಗಳು ಮತ್ತು ರಿಜಿಸ್ಟ್ರಾರ್ ಗಳು ಖಾಸಗಿ ವಿವಿಗಳಿಂದ ಕಲಿತುಕೊಳ್ಳುವುದು ಸಾಕಷ್ಟಿದೆ ಎಂದು ಹೇಳಿದ್ದಾರೆ. ನಿನ್ನೆ ಬೆಂಗಳೂರಿನ ರೇವಾ ವಿವಿ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೋಟ್ಯಂತರ ಅನುದಾನ ನೀಡಿದರೂ ಕೂಡ ಸರ್ಕಾರಿ ವಿವಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದಿದ್ದಾರೆ.