ರಾಜಕೀಯ
ಅಕ್ರಮಗಳಿಗೆ ಬೇಸತ್ತು ರಾಜಿನಾಮೆ ನೀಡಿದ ಗ್ರಾಪಂ ಸದಸ್ಯ
ಚಿತ್ರದುರ್ಗ ಜಿಲ್ಲೆಯ ಗುಡ್ಡದರಂಗವ್ವನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಕೆ.ಜಿ. ತಿಪ್ಪೇಸ್ವಾಮಿ ರಾಜಿನಾಮೆ
ಸುದ್ದಿದಿನ ಡೆಸ್ಕ್: ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆದಿಲ್ಲ ಎಂಬ ಬೇಸರದಿಂದ ಗ್ರಾಮ ಪಂಚಾಯತಿ ಸದಸ್ಯ ರಾಜೀನಾಮೆ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಗುಡ್ಡದರಂಗವ್ವನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಕೆ.ಜಿ. ತಿಪ್ಪೇಸ್ವಾಮಿ ಅವರು ಅಧ್ಯಕ್ಷರಿಗೆ ರಾಜಿನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಏನಿದೆ?
“ನಾನು ಗುಡ್ಡದ ರಂಗವ್ವನಹಳ್ಳಿ ಗ್ರಾಮ ಪಂಚಾಯತಿ ಸದಸ್ಯನಾಗಿದ್ದು, ಗ್ರಾಮ ಪಂಚಾಯತಿಯಲ್ಲಿ ಮೂರು ವರ್ಷದ ಅವಧಿಯಲ್ಲಿ ನಡೆದಿರುವ ಕೆಲಸಗಳು ತೃಪ್ತಿ ತಂದಿರುವುದಿಲ್ಲ. ಸಾಮಾನ್ಯ ಸಭೆಯಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ ಮತ್ತು ಈ ಮೂರು ವರ್ಷದ ಅವಧಿಯಲ್ಲಿನ ಲೆಕ್ಕ- ಖರ್ಚುಗಳು ನೀಡಿರುವುದಿಲ್ಲ. 14ನೇ ಹಣಕಾಸು ಯೋಜನೆಯಲ್ಲಿ ಅನುದಾನ ನೀಡಿರುವುದಿಲ್ಲ. ಇದರ ಬಗ್ಗೆ ಕೇಳಿದರೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿಸಿ ಎಂದು ಹೇಳುತ್ತೀರಾ? ಬೀದಿ ದೀಪಗಳ ನಿರ್ವಹಣೆಯ ಖರ್ಚನ್ನು ನಕಲು ಬಿಲ್ಲುಗಳನ್ನು ಸೃಷ್ಟಿಸಿಕೊಂಡು ಸರ್ಕಾರದ ಹಣವನ್ನು ಪಡೆದಿರುತ್ತಾರೆ.
ಇದುವರೆಗೂ ಸ್ಥಾಯಿ ಸಮಿತಿಗಳನ್ನು ರಚನೆ ಮಾಡಿಲ್ಲ’ ಎಂದು ದೂರಿದ್ದಾರೆ.