ದಿನದ ಸುದ್ದಿ
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.
ರಾಜ್ಯದಾದ್ಯಂತ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಚಾಲನೆ ನೀಡಿದ್ದು,ಸರ್ಕಾರ ಸೇವಾ ಖಾಯಂಯಾತಿ ಆದೇಶ ಹೊರಡಿಸುವವರೆಗೂ ಮುಷ್ಕರವನ್ನು ಕೈಬಿಡುವುದಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅತಿಥಿ ಉಪನ್ಯಾಸಕರಾದ, ಶಿವಕುಮಾರ್, ಸಂತೋಷ್, ಶಕೀಲ್ ಅಹಮದ್,ಮುರಳಿ ಅಮಿತ್, ಗಿರೀಶ್, ಶ್ರೀನಿವಾಸ್, ಅರುಣ್, ಮಂಜುಳ, ಶೀಲ, ಶಿಲ್ಪ, ಸೇರಿದಂತೆ ಎಲ್ಲಾ ಅಥಿತಿ ಉಪನ್ಯಾಸಕರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243