ದಿನದ ಸುದ್ದಿ

ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ. ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ| ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮ ಇಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ಪಿ.ಸಿ.ಎಂ.ಬಿ ವಿಷಯಗಳಿಗೆ ಅಂಗ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಂಗ್ಲೀಷ್ ಉಪನ್ಯಾಸಕರು ಹುದ್ದೆ ಸಂಖ್ಯೆ-1, ಗಣಿತ ಉಪನ್ಯಾಸಕರು ಹುದ್ದೆ ಸಂಖ್ಯೆ-1, ಭೌತಶಾಸ್ತ್ರ ಉಪನ್ಯಾಸಕರು ಹುದ್ದೆ ಸಂಖ್ಯೆ-1, ರಸಾಯನ ಶಾಸ್ತ್ರ ಉಪನ್ಯಾಸಕರ ಹುದ್ದೆ ಸಂಖ್ಯೆ-1 ಹುದ್ದೆಗೆ ಎಂ.ಎಸ್ಸಿ ಮತ್ತು ಬಿ.ಎಡ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಮೇ.30 ರೊಳಗಾಗಿ ವಸತಿ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9008815296, 8970159714 ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version