ದಿನದ ಸುದ್ದಿ
ಮೊರಾರ್ಜಿ ದೇಸಾಯಿ ವಸತಿ ಶಾಲೆ : ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ಕಲಬುರಗಿ : ನಗರದ ಮೊರಾರ್ಜಿ ದೇಸಾಯಿ ಪರಿಶಿಷ್ಟ ಜಾತಿ ಮತ್ತು ಪಂಗಡ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ 2020-21ನೇ ಸಾಲಿಗೆ ಖಾಲಿ ಇರುವ ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶಾಲೆಯಲ್ಲಿ ಖಾಲಿಯಿರುವ ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ, ಬಿ.ಇಡಿ ಪದವಿ ಹೊಂದಿರಬೇಕು. ಹಾಗೂ ಅಭ್ಯರ್ಥಿಗಳು 2021ರ ಜನವರಿ 7ರ ಸಂಜೆ 4.30 ಗಂಟೆಯೊಳಗಾಗಿ ಸ್ವ-ವಿವರಗಳನ್ನೊಳಗೊಂಡ ಅರ್ಜಿ ಸಲ್ಲಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243