Connect with us

ರಾಜಕೀಯ

ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ನಾಳೆ ಪ್ರಮಾಣ ವಚನ ಸ್ವೀಕಾರ

Published

on

ಸುದ್ದಿದಿನ ಡೆಸ್ಕ್ : ಬಿಜೆಪಿಯ ಹಿರಿಯ ಮುಖಂಡ ಭೂಪೇಂದ್ರ ಪಟೇಲ್ ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗಾಂಧಿನಗರದಲ್ಲಿ ಪಕ್ಷದ ವೀಕ್ಷಕರು ಹಾಗೂ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಅರ್ಜುನ್ ಮುಂಡಾ ಮತ್ತು ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ಸುಮಾರು 2 ಲಕ್ಷದಷ್ಟು ಮತಗಳ ಅಂತರದಿಂದ ಘಟ್ಲೋಡಿಯಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬ್ಯಾಂಕ್ ದರೋಡೆ ಹೆಚ್ಚಳ ; ಭದ್ರತಾ ಮಾನದಂಡಗಳನ್ನು ಬ್ಯಾಂಕ್‍ಗಳು ಪಾಲನೆ ಮಾಡುವುದು ಕಡ್ಡಾಯ : ಎಸ್ಪಿ ಉಮಾ ಪ್ರಶಾಂತ್ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಬ್ಯಾಂಕ್‍ಗಳ ದರೋಡೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಭದ್ರತಾ ಮಾನದಂಡದ ಜೊತೆಗೆ ಸಿಬ್ಬಂದಿಗಳ ಮಾಹಿತಿ ಸಂಗ್ರಹದಲ್ಲಿ ನಿರ್ಲಕ್ಷ್ಯತೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಪೋಲಿಸ್ ಕಛೇರಿಯಲ್ಲಿ ಜಿಲ್ಲಾ ಮಟ್ಟದ ಬ್ಯಾಂಕಗಳ ಭದ್ರತೆಗಾಗಿ ಬ್ಯಾಂಕಿನ ಎಲ್ಲಾ ವ್ಯವಸ್ಥಾಪಕರುಗಳಿಗೆ ಆಯೋಜಿಸಲಾಗಿದ್ದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬ್ಯಾಂಕಿನ ವ್ಯವಸ್ಥಾಪಕರುಗಳು ಬ್ಯಾಂಕ್‍ಗೆ ಬೇಕಾದ ಹೈಸೆಕ್ಯೂರಿಟಿ ಸಿಸಿ ಕ್ಯಾಮೆರಾಗಳ ಜೊತೆಗೆ ಅಲರಾಮ್‍ಗಳನ್ನು ಅಳವಡಿಸಿಕೊಳ್ಳಬೇಕು. ಬ್ಯಾಂಕ್‍ನ ಸೆಕ್ಯುರಿಟಿ ಸಿಬ್ಬಂದಿಯ ಮಾಹಿತಿ ಸಂಗ್ರಹದ ಜೊತೆಗೆ ಹತ್ತಿರದ ಪೊಲೀಸ್ ಠಾಣೆಯೊಂದಿಗೆ ಸೆಕ್ಯುರಿಟಿ ಕುರಿತು ಚರ್ಚಿಸಬೇಕಾಗುತ್ತದೆ ಎಂದರು.

ಬ್ಯಾಂಕ್‍ನ ಒಳಗೆ ಸ್ಟ್ರಾಂಗ್ ರೂಂ ಡಿಜಿಲಾಕರ್, ಸ್ಟ್ರೋಕ್ ಡಿಟೆಕ್ಟರ್ಗಗಳು, ಹೀಟ್ ಡಿಟೆಕ್ಟರ್‍ಗಳು, ಬ್ಯಾಂಕುಗಳ ಬಳಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಬಂದಲ್ಲಿ ಅಂತಹವರ ಮಾಹಿತಿಯನ್ನು ಪೋಲೀಸ್ ಠಾಣೆಗಳಿಗೆ ನೀಡುವಂತೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಿಳಿಸಿ ಸ್ಟ್ರಾಂಗ್ ರೂಮ್‍ಗೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರತಿದಿನ ಭೇಟಿ ನೀಡುವ ನಮೂನೆಯಲ್ಲಿ ದಾಖಲು ಮಾಡಬೇಕು. ಬ್ಯಾಂಕ್‍ಗಳಿಗೆ ಪ್ರತಿದಿನ ಬೀಟ್ ಪೋಲೀಸರು ಭೇಟಿ ನೀಡುವ ಬಗ್ಗೆ ಇ-ಬೀಟ್ ವ್ಯವಸ್ಥೆ ಮಾಡುವುದು. ಪ್ರತಿ ಬೀಟ್ ಸಿಬ್ಬಂದಿಗಳು ಭೇಟಿ ನೀಡುತ್ತಿರುವ ಬಗ್ಗೆ ರಾತ್ರಿ ಗಸ್ತಿನ ಉಸ್ತುವಾರಿ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲನೆ ಮಾಡಲು ಸೂಚನೆ ನೀಡಿದರು.

ಜಿಲ್ಲಾ ಕಂಟ್ರೋಲ್ ರೂಂನವರು ಪ್ರತಿದಿನ ಬ್ಯಾಂಕ್‍ಗಳಿಗೆ ಬೀಟ್ ಸಿಬ್ಬಂದಿಗಳು ಹಾಗೂ ರಾತ್ರಿ ಗಸ್ತಿನ ಅಧಿಕಾರಿಗಳು ಭೇಟಿ ನೀಡುತ್ತಿರುವ ಬಗ್ಗೆ ಕಡ್ಡಾಯವಾಗಿ ಮಾಹಿತಿ ಪಡೆದು ನಮೂದು ಮಾಡುವುದು. ಹೊರವಲಯಗಳಲ್ಲಿರುವ ಬ್ಯಾಂಕ್‍ಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕೆಂದು ಸೂಚನೆ ನೀಡಿದರು.

ಠಾಣಾ ವ್ಯಾಪ್ತಿಯ ಪಿಐ ಮತ್ತು ಪಿಎಸ್‍ಐ ರವರು ಸೆಕ್ಯೂರಿಟಿ ಆಡಿಟ್ ವರದಿಯನ್ನು ಕಡ್ಡಾಯವಾಗಿ ಪಡೆದು ಜಿಲ್ಲಾ ಪೆÇಲೀಸ್ ಕಚೇರಿಗೆ ಕಳುಹಿಸಿಕೊಡಬೇಕು. ಬ್ಯಾಂಕುಗಳ ಒಳಭಾಗ ಮತ್ತು ಹೊರಭಾಗದಲ್ಲಿ, ಎಟಿಎಂ ಇರುವ ಕಡೆಗಳಲ್ಲಿ ಕಡ್ಡಾಯವಾಗಿ ಮೋಷನ್ ಸಿಸಿ ಟಿವಿಗಳನ್ನು ಅಳವಡಿಸಿ ಈ ಛಾಯಾಚಿತ್ರ ಮತ್ತು ರೆಕಾಡಿರ್ಂಗ್‍ನ್ನು ಡ್ರೈವ್‍ನಲ್ಲಿ ಸೇವ್ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಮಹಾಪೌರರಾದ ಚಮನ್‍ಸಾಬ್ ಕೆ, ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪ ಪೊಲೀಸ್ ಅಧೀಕ್ಷಕರಾದ ಮಂಜುನಾಥ್, ಎಎಸ್‍ಪಿ ಸ್ಯಾಮ್ ವರ್ಗೀಸ್ ಮತ್ತು ವಿವಿಧ ಬ್ಯಾಂಕ್‍ಗಳ ವ್ಯವಸ್ಥಾಪಕರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್

Published

on

ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ಸೋಲಾರ್ ಘಟಕದ ಕಾಮಗಾರಿ ಪರಿಶೀಲಿಸಿದ ಅವರು, ಜಿಲ್ಲೆಯ ಆರೂ ತಾಲೂಕುಗಳಲ್ಲಿ ಒಂಬತ್ತು ಸೋಲಾರ್ ಘಟಕಗಳು ಸ್ಥಾಪನೆಯಾಗಲಿದ್ದು ಇದರಿಂದ ಅರವತ್ತೆರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.

ಇಂಧನ ಇಲಾಖೆಯು ರಾಜ್ಯಾದ್ಯಂತ 154 ಸೋಲಾರ್ ಘಟಕಗಳನ್ನು ಸ್ಥಾಪಿಸಿ 1 ಸಾವಿರದ 81 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಸ್ವಾವಲಂಬನೆ ಸಾಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

ಇನ್ನೊಂದೆಡೆ ತುಮಕೂರಿನ ಸಿರಾ ತಾಲ್ಲೂಕಿನ ಚೆಂಗಾವರದಲ್ಲಿ ಪಿ.ಎಂ.ಕುಸುಮ್ ಯೋಜನೆಯಡಿ ನಿರ್ಮಿಸಿರುವ ಸೋಲಾರ್ ಪಾರ್ಕ್ ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ

Published

on

ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಆದೇಶಿಸಿದ್ದಾರೆ.

ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.

ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending