ರಾಜಕೀಯ
ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ನಾಳೆ ಪ್ರಮಾಣ ವಚನ ಸ್ವೀಕಾರ
ಸುದ್ದಿದಿನ ಡೆಸ್ಕ್ : ಬಿಜೆಪಿಯ ಹಿರಿಯ ಮುಖಂಡ ಭೂಪೇಂದ್ರ ಪಟೇಲ್ ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಗಾಂಧಿನಗರದಲ್ಲಿ ಪಕ್ಷದ ವೀಕ್ಷಕರು ಹಾಗೂ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಅರ್ಜುನ್ ಮುಂಡಾ ಮತ್ತು ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.
ಸುಮಾರು 2 ಲಕ್ಷದಷ್ಟು ಮತಗಳ ಅಂತರದಿಂದ ಘಟ್ಲೋಡಿಯಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243