ರಾಜಕೀಯ
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್|ಕುಟುಂಬ ರಾಜಕಾರಣದಿಂದ ಹೊರಬರಲು ಕ್ರಮ | ಎಚ್.ಡಿ.ದೇವೇಗೌಡ
ಸುದ್ದಿದಿನ,ಬೆಂಗಳೂರು | ಶಾಸಕ ಎಚ್.ವಿಶ್ವನಾಥ್ ಅವರನ್ನು ಜಾತ್ಯಾತೀತ ಜನತಾದಳದ ನೂತನ ರಾಜ್ಯಾಧ್ಯಾಕ್ಷರನ್ನಾಗಿ ಆಯ್ಕೆ ಮಾಡಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಘೋಷಿಸಿದ್ದಾರೆ.
ಸಚಿವ ಜಿ.ಟಿ. ದೇವೇಗೌಡ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿಯಾಗಿ ಮಾಡಿದ ಬೆನ್ನಲ್ಲೇ ಹುಣಸೂರು ಕ್ಷೇತ್ರದ ಶಾಸಕ ಎಚ್.ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವ ದೇವೇಗೌಡರು, ಈ ಮೂಲಕ ಮೈಸೂರು ಭಾಗದಲ್ಲಿ ತನ್ನ ಬಲ ಹೆಚ್ಚಿಸಿಕೊಳ್ಳಲು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಹಾಗೇ ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತದೆ ಎಂಬ ಅಪವಾದಿಂದ ಹೊರಬರಲು ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಹಿಂದಿನ ಚುನಾವಣೆಯಲ್ಲಿ ಟಿಕೆಟ್ ನಿರಾಕಸಿತ್ತು. ಮುಂದಿನ ಚುನಾವಣೆಗಳಲ್ಲಿ ಯುವಕರಿಗೆ ನಾವು ಹೆಚ್ಚಿನ ಅವಕಾಶ ನೀಡುತ್ತೇವೆ ಎಂದು ದೇವೇಗೌಡ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401