ದಿನದ ಸುದ್ದಿ

ಹೆಚ್ ಎ ಎಲ್ | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಶಿವಮೊಗ್ಗ : ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್), ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಓಪಿಎ ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್ ಒಟ್ಟು 1060 ಹುದ್ದೆಗಳಿಗೆ ಅಪ್ರೆಂಟಿಸ್ ತರಬೇತಿ ನೀಡಲಾಗುವುದು. ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಮತ್ತು ಐಟಿಐ ಅಂಕಪಟ್ಟಿಗಳು, ಜಾತಿ ಪ್ರಮಾಣ ಪತ್ರ, ಆಧಾರ್ ಮತ್ತು ಪಾನ್(Pಂಓ) ಕಾರ್ಡ್, ಎನ್‍ಸಿವಿಟಿ ಪೋರ್ಟಲ್ ರಿಜಿಸ್ಟ್ರೇಷನ್ ನಂಬರ್, ಎಂಪ್ಲಾಯ್‍ಮೆಂಟ್ ಕಾರ್ಡ್ ಮತ್ತು 04 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು.

ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ನಕಲು ಪ್ರತಿಗಳನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 28 ಕಡೆಯ ದಿನವಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ದೂರವಾಣಿ ಸಂಖ್ಯೆ :08182-255293, 9482023412, 9535312531 ನ್ನು ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version