ಕ್ರೀಡೆ

ಜಿಲ್ಲಾ ಮಟ್ಟದ ‘ವಿಶೇಷ ಚೇತನ ಮಕ್ಕಳ’ ಕ್ರೀಡಾಕೂಟ

Published

on

ಸುದ್ದಿದಿನ,ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು 2019-20ನೇ ಸಾಲಿನ 14/17ವರ್ಷ ವಯೋಮಿತಿಯೊಳಗಿನ ಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟವನ್ನು ಡಿಸೆಂಬರ್ 23ರಂದು ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ(ಪ್ರೌಢಶಾಲಾ ವಿಭಾಗ)ಲ್ಲಿ ಆಯೋಜಿಸಲಾಗಿದೆ.

ಜಿಲ್ಲೆಯ ಎಲ್ಲಾ ತಾಲೂಕುಗಳ ವಿಶೇಷ ಚೇತನ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version