ದಿನದ ಸುದ್ದಿ
ಹಂಷ್‌ಖಾಲಿ ಸಾಮೂಹಿಕ ಅತ್ಯಾಚಾರ : ಕೋಲ್ಕೊತಾ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶ
ಸುದ್ದಿದಿನ, ಪ.ಬಂ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಹಂಷ್‌ಖಾಲಿ ಸಾಮೂಹಿಕ ಅತ್ಯಾಚಾರ ಮತ್ತು ಹದಿಹರೆಯದವರ ಸಾವಿನ ಕುರಿತು ಕೋಲ್ಕೊತಾ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ.
ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯಲು ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಮತ್ತು ಸ್ಥಳೀಯ ಹಾಗೂ ರಾಜ್ಯದ ನಿವಾಸಿಗಳಲ್ಲಿ ವಿಶ್ವಾಸ ಮೂಡಿಸಲು, ಸ್ಥಳೀಯ ಪೊಲೀಸರ ಬದಲಿಗೆ ಸಿಬಿಐ ತನಿಖೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ರಾಜರ್ಷಿ ಭಾರದ್ವಾಜ್ ಅವರ ವಿಭಾಗೀಯ ಪೀಠ, ಮೇ 2ರಂದು ತನಿಖೆಯ ಪ್ರಗತಿಯ ಕುರಿತು ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ.
ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಮತ್ತು ಪ್ರಕರಣದ ಸಾಕ್ಷಿಗಳಿಗೆ ಸಂಪೂರ್ಣ ರಕ್ಷಣೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೂ ಸೂಚಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243