Connect with us

ದಿನದ ಸುದ್ದಿ

ಸಹಭಾಗಿತ್ವ ಸೇವಾಮನೋಭಾವದಿಂದ ಸಂಸ್ಥೆಯ ಅಭಿವೃದ್ಧಿ ಸಾಧ್ಯ : ಪ್ರಾಂಶುಪಾಲ ಡಾ.ರಮೇಶ್.ಎಂ.ಎನ್

Published

on

ಸುದ್ದಿದಿನ,ಹರಿಹರ:ನೌಕರರ ನಿಸ್ವಾರ್ಥತೆ, ಸಹಭಾಗಿತ್ವ ಹಾಗೂ ಅನ್ಯೋನ್ಯತೆಯ ಸೇವೆಯ ಮನೋಭಾವದಿಂದ ಸಂಸ್ಥೆಯ ಅಭಿವೃದ್ಧಿ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಂ.ಎನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧೀಕ್ಷಕರಾದ ವೀರಭದ್ರಯ್ಯ.ಆರ್.ಎಂ ಅವರ ವಯೋನಿವೃತ್ತಿ ಪ್ರಯುಕ್ತ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜದ ಸರ್ವರ ಏಳ್ಗೆಗಾಗಿ ಕಾರ್ಯನಿರ್ವಹಿಸುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ಪ್ರತಿಯೊಬ್ಬ ಸಹೋಗ್ಯೋಗಿಗಳ ನಡುವೆ ಸಮನ್ವಯತೆ ಪ್ರಮುಖವಾದದ್ದು, ಈ ಹಿನ್ನೆಲೆಯಲ್ಲಿ ಅಧೀಕ್ಷಕರಾದ ವೀರಭದ್ರಯ್ಯ ಅವರ ಕರ್ತವ್ಯ ಎಲ್ಲರಿಗೂ ಅನುಕರಣೀಯ ಎಂದು ಅವರ ಸುಧೀರ್ಘ ಸೇವೆಯನ್ನು ನೆನೆದರು.

ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಕುಮಾರ್.ಎಂ ಅವರು ಮಾತನಾಡಿ, ಅಧೀಕ್ಷಕರಾದ ವೀರಭದ್ರಯ್ಯ ಅವರ 38 ವರ್ಷಗಳ ವೃತ್ತಿಯಲ್ಲಿ ಎಲ್ಲೂ ಕಳಂಕವನ್ನು ಪಡೆಯದೆ ಶುದ್ಧ ಅಸ್ತರಾಗಿ ವೃತ್ತಿ ನಿಷ್ಠೆ, ಪ್ರಮಾಣಿಕತೆ, ಕರ್ತವ್ಯ ಮತ್ತು ಸಮಯ ಪ್ರಜ್ಞೆ ಹೊಂದಿದ್ದರು. ಮಿತ ಭಾಷಿಕರಾದ ಶ್ರೀಯುತರು ನಮ್ಮ ಕಾಲೇಜಿನಲ್ಲೇ ವೃತ್ತಿ ಜೀವನದ ಭಾಗಶಃ ಭಾಗವನ್ನು ಕಳೆದಿದ್ದು, ಅವರ ಸೇವೆಯು ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.

ಈ ಸಮಯದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಐ.ಕ್ಯೂ.ಎಸ್.ಸಿ ಸಂಯೋಜಕರಾದ ಡಾ.ಅನಂತನಾಗ್.ಹೆಚ್.ಪಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಡಾ.ಮಂಜುನಾಥ.ಬಿ.ಕೆ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ತಿಪ್ಪೇಸ್ವಾಮಿ.ಹೆಚ್, ರಾಜ್ಯಶಾಸ್ತ್ರ ಅಧ್ಯಾಪಕರಾದ ಕಳಕಪ್ಪ ಚೌರಿ, ಪ್ರಥಮ ದರ್ಜಿ ಸಹಾಯಕರಾದ ರವೀಂದ್ರನಾಥ್.ಬಿ.ಜೆ ಅವರುಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು. ಕಾಲೇಜಿನ ಎಲ್ಲರೂ ಸಿಬ್ಬಂದಿಯವರು ಅಧೀಕ್ಷಕರಾದ ವೀರಭದ್ರಯ್ಯ.ಆರ್.ಎಂ ಅವರನ್ನು ಸನ್ಮಾನಿಸಿದರು.

ವಿದ್ಯಾರ್ಥಿನಿ ಕು.ಆಷ್ಲೇಷಾ ಪ್ರಾರ್ಥಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಗೌರಮ್ಮ.ಎಸ್.ಎಂ ಅವರು ವಯೋನಿವೃತ್ತಿ ಹೊಂದುತ್ತಿರುವ ವೀರಭದ್ರಯ್ಯ ಅವರನ್ನು ಪರಿಚಯಿಸಿ, ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ವೆಂಕಪ್ಪನವರ ಬಸವರಾಜು ಅವರು ಅವರು ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.

ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಆನ್‍ಲೈನ್ ಮೂಲಕ ಡಿಸೆಂಬರ್ 3 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending