ದಿನದ ಸುದ್ದಿ
ಹರಿಹರ | ಜುಲೈ 13 ರಂದು ರಾಷ್ಟ್ರೀಯ ಲೋಕಾದಾಲತ್ ಅಂಗವಾಗಿ ಪೂರ್ವಭಾವಿ ಸಭೆ
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 13 ರಂದು ರಾಷ್ಟ್ರೀಯ ಲೋಕಾದಾಲತ್ತು ಹಮ್ಮಿಕೊಳ್ಳಲಾಗಿದ್ದು, ಲೋಕ ಅದಾಲತ್ತಿನ ಪೂರ್ವಭಾವಿಯಾಗಿ ಜೂ. 29 ರಂದು ಹರಿಹರದಲ್ಲಿ ಸಭೆ ಮತ್ತು ಸಮಾಲೋಚನಾ ಸಭೆ ಆಯೋಜಿಸಲಾಗಿತ್ತು.
ಲೋಕಾದಾಲತ್ ಪೂರ್ವಭಾವಿ ಸಭೆಯಲ್ಲಿ ಒಂದನೇ ಅಪರ ಜಿಲ್ಲಾ ಮತ್ತು ಸತ್ಯ ನ್ಯಾಯಾಧೀಶರಾದ ಎಂ. ಹೆಚ್.ಅಣ್ಣಯ್ಯನವರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಮಹಾವೀರ ಮಾ.ಕರೆಣ್ಣವರ್ ಹಾಗೂ ಹರಿಹರದ ಎಲ್ಲಾ ನ್ಯಾಯಾಧೀಶರು, ವಕೀಲರ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಸಂಧಾನಕಾರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243