ದಿನದ ಸುದ್ದಿ
ವರ್ಷದ ಬಳಿಕ ತೆರೆದ ಹಾಸನಾಂಬೆ ದೇಗುಲ ; ನಾಳೆಯಿಂದ ಭಕ್ತರಿಗೆ ದರ್ಶನ
ಸುದ್ದಿದಿನಡೆಸ್ಕ್:ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಹಾಸನ ನಗರದ ಅಧಿದೇವತೆ ಹಾಸನಾಂಬೆಯ ಗರ್ಭಗುಡಿಯ ಬಾಗಿಲನ್ನು ಇಂದು ಶಾಸ್ರೋಕ್ತವಾಗಿ ತೆರೆಯಲಾಯಿತು.
ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಅರಸು ವಂಶಸ್ಥರು ಬಾಳೆಗಿಡ ಕಡಿದ ನಂತರ ಗರ್ಭಗುಡಿ ಬಾಗಿಲು ತೆರೆಯಲಾಯಿತು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗೇಶ್ವರ ಸ್ವಾಮೀಜಿ, ಜಿಲ್ಲೆಯ ಸಂಸದ, ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಇಂದಿನಿಂದ ನವೆಂಬರ್ 3ರವರೆಗೆ ಜಾತ್ರಾಮಹೋತ್ಸವ ನಡೆಯಲಿದ್ದು, ನಾಳೆಯಿಂದ ನವೆಂಬರ್ 2 ರವರೆಗೆ ಭಕ್ತರಿಗೆ ಹಾಸನಾಂಬೆ ದರ್ಶನ ದೊರೆಯಲಿದೆ.
ವರ್ಷದಲ್ಲಿ ಒಂದು ಬಾರಿ ಮಾತ್ರ ಈ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯುವುದು ವಿಶೇಷವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243