ದಿನದ ಸುದ್ದಿ
ಹಾಸನ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 198 ಕ್ಕೆ ಏರಿಕೆ
ಸುದ್ದಿದಿನ,ಹಾಸನ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 198 ಕ್ಕೆ ಏರಿಕೆಯಾಗಿದ್ದು, ಹೊಸದಾಗಿ 12 ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ಮೂರು ಪ್ರಕರಣಗಳು ಮುಂಬೈನಿಂದ ಬೆಂಗಳೂರಿಗೆ ಬಂದು ಹಾಸನ ಜಿಲ್ಲೆಗೆ ಬಂದಿದ್ದಾರೆ. ಉಳಿದ 9 ಪ್ರಕರಣಗಳು ಕ್ವಾರಂಟೈನ್ ಕೇಂದ್ರಗಳಲ್ಲಿ ಇದ್ದು ಎರಡನೇ ಬಾರಿ ಪರೀಕ್ಷೆ ನಡೆಸಿದಾಗ ಕೋವಿಡ್ ಪಾಸಿಟೀವ್ ಬಂದಿದೆ. ನೆನ್ನೆಯಿಂದ ಪತ್ತೆಯಾದ ಎಲ್ಲ ಪ್ರಕರಣಗಳೂ ಸಹ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವರಾಗಿದ್ದು, ಎಲ್ಲರೂ ಸಹ ಕ್ವಾರಂಟೈನ್ ಕೇಂದ್ರಗಳಲ್ಲಿ ಇದ್ದರು. ಅವರೆಲ್ಲರನ್ನೂ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.
ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಈವರೆಗೆ 198 ಕೋವಿಡ್ ಪಾಸಿಟೀವ್ ಪ್ರಕರಣಗಳು ವರದಿಯಾಗಿದ್ದು, 100 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದ 98 ಜನ ಆಸ್ಪತ್ರೆ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 199 ಮಂದಿಯನ್ನು ಹೋಂ ಕ್ವಾರಂಟೈನ್‍ನಲ್ಲಿ ಇರಿಸಲಾಗಿದ್ದು, 202 ಮಂದಿಯನ್ನು ಸಾಂಸ್ಥಿಕ ಐಸೋಲೇಷನ್ ಕೇಂದ್ರಗಳಲ್ಲಿ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243