ದಿನದ ಸುದ್ದಿ
ಹಾಸನ ಜಿಲ್ಲಾಧಿಕಾರಿಯಾಗಿ ಮತ್ತೆ ರೋಹಿಣಿ ಸಿಂಧೂರಿ
ಸುದ್ದಿದಿನ ಡೆಸ್ಕ್ : ವರ್ಗಾವಣೆ ವಿಚಾರದಲ್ಲಿ ವಿವಾದಕ್ಕೆ ಒಳಗಾಗಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ರಾಜ್ಯ ಸರ್ಕಾರ ಸೋಮವಾರ ಮತ್ತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಆದೇಶಿಸಿದೆ.
ಅಂದಿನ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿತ್ತು. ಈ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ಎತ್ತಿ ಹಿಡಿದಿತ್ತು. ಈ ಕ್ರಮವನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪುನಃ ಹೈಕೋರ್ಟ್ ಮೆಟ್ಟಿಲೇರಿದ್ದರು. ಈಗ ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥ ಪಡಿಸಿದ್ದು, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಆದೇಶ ನೀಡಿದೆ.
ಜನವರಿ 22ರಂದು ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ರೋಹಿಣಿ ಅವರನ್ನು ಹಠಾತ್ ವರ್ಗಾವಣೆ ಮಾಡಲಾಗಿತ್ತು. ನಂತರ ರಾಜ್ಯ ಸರ್ಕಾರದ ಆದೇಶವನ್ನ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿತ್ತು. ಸರ್ಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಿಂದಲೂ ಟೀಕೆ ಕೇಳಿ ಬಂದಿತ್ತು.