Connect with us

ದಿನದ ಸುದ್ದಿ

ಹಾವೇರಿ – ಹಾನಗಲ್ – ಧಾರವಾಡ ರಸ್ತೆ ಮುಳುಗಡೆ : ಮಾರ್ಗ ಬದಲಿಸಿ ಡಿಸಿ ಆದೇಶ

Published

on

ಸುದ್ದಿದಿನ ,ಹಾವೇರಿ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಧರ್ಮಾ ನದಿ ಉಕ್ಕಿ ಹರಿಯುತ್ತಿದ್ದು, ಹಾವೇರಿ ಹಾನಗಲ್ ರಸ್ತೆ ಸಂಪೂರ್ಣ ಮುಳಗಡೆಯಾಗಿದೆ.ಹೆದ್ದಾರಿ ಮಾರ್ಗ ಬದಲಾಯಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.

ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಮಾರ್ಗದ ನಿಪ್ಪಾಣಿ ಹತ್ತಿರ ಬಿರುಕು ಬಿಟ್ಟು ಸಂಚಾರ ಸ್ಥಗಿತಗೊಂಡಿರುವ ಕಾರಣ ಹಾವೇರಿಯಿಂದ ಧಾರವಾಡ ಕಡೆಗೆ ಹೋಗುವ ಮಾರ್ಗದ ವಾಹನಗಳನ್ನು ಶಿಗ್ಗಾಂವ ಲಕ್ಷ್ಮೇಶ್ವರ ಮುಖಾಂತರ ಗದಗ ಮಾರ್ಗವಾಗಿ ವಿಜಯಪುರ ಮುಂತಾದಕಡೆ ಸಂಚರಿಸಲು ಹಾವೇರಿ ಜಿಲ್ಲಾಧಿಕಾರಿ ಕೃಷ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.

Udayakala News- ಹಾವೇರಿ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಧರ್ಮಾ ನದಿ ಉಕ್ಕಿ ಹರಿಯುತ್ತಿದ್ದು, ಹಾವೇರಿ…

Posted by Udayakala News on Thursday, 8 August 2019

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ನಿಪ್ಪಾಣಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 4 ಬಿರುಕು ಬಿಟ್ಟ ಕಾರಣ ಪೂನಾ-ಬೆಂಗಳೂರು ಹಾಗೂ ಬೆಂಗಳೂರ-ಪೂನಾಕ್ಕೆ ಬರುವ ಹಾಗೂ ಹೋಗುವ ವಾಹನಗಳ ಸಂಚಾರ ಸಂಪೂರ್ಣ ನಿಲುಗಡೆಯಾಗಿದೆ. ಧಾರವಾಡ ಜಿಲ್ಲೆಯ ಸರಹದ್ದಿನಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ 4ರ ಎರಡು ಬದಿಯಲ್ಲಿ ವಾಹನಗಳು ನಿಲುಗಡೆಯಾಗಿವೆ. ಮುಂದುವರೆದು ಬರುವ ವಾಹನಗಳಿಗೆ ಸ್ಥಳವಕಾಶವಿಲ್ಲದ ಕಾರಣ ಮೇಲಿನಂತೆ ಮಾರ್ಗ ಬದಲಾಯಿಸಿ ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 31ರಲ್ಲಿ ಅಧಿಕಾರದನ್ವಯ ಹಾವೇರಿ ಕಡೆಯಿಂದ ಧಾರವಾಡ ಕಡೆಗೆ ಹೋಗುವ ವಾಹನಗಳನ್ನು ಶಿಗ್ಗಾಂವ, ಲಕ್ಷ್ಮೇಶ್ವರ ಮಾರ್ಗವಾಗಿ ಗದಗ ಮುಖಾಂತರ ಸಂಚರಿಸಲು ಅವಕಾಶ ಮಾಡಿಕೊಟ್ಟು ಆದೇಶ ಹೊರಡಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending